Advertisement
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದ ಮುಸುಕು ಅವರ ಹಾಗೂ ಅವರ ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನೂ ರಾಜಕೀಯವಾಗಿ ನೋಡುವುದು, ಧೆÌàಷದಿಂದ ನೋಡುವುದರಿಂದ ಅವರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ. ಸದನ ಶುಕ್ರವಾರದವರೆಗೂ ನಡೆಯಬೇಕಿತ್ತು.
Related Articles
ಧರಣಿ ಮಾರ್ಗದ ಮುಖಾಂತರ ರಾಜ್ಯದ ಜನತೆ ಹಾಗೂ ಸದನದ ದಾರಿಯನ್ನು ತಪ್ಪಿಸಲು ನೋಡುತ್ತಿದ್ದಾರೆ. ವಸ್ತ್ರ ಸಂಹಿತೆಯ ಬಗ್ಗೆ ಉತ್ಛ ನ್ಯಾಯಾಲಯದಲ್ಲಿ ಗಂಭೀರವಾದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಅದರ ಅನುಷ್ಠಾನವಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗೊಂದಲಗಳನ್ನು ಸೃಷ್ಟಿ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ, ಅಂತಿಮ ಆದೇಶ ಬರುವವರೆಗೂ ಕಾದು, ಶಾಂತಿಯಿಂದ ಇರಬಹುದಾಗಿತ್ತು. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ಪರೀಕ್ಷೆಗಳಿವೆ ಎಂಬ ಕನಿಷ್ಠ ಸಂದೇಶವನ್ನು ಕೊಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಮಾನವೀಯತೆ ವಿಚಾರವನ್ನೇ ಇಟ್ಟುಕೊಂಡಿಲ್ಲ. ರಾಜಕಾರಣವೇ ಪ್ರಮುಖವಾಗಿದೆ.
Advertisement
ರಾಜಕಾರಣದಲ್ಲೂ ಕೂಡ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್ ಅಧ್ಯಕ್ಷರು, ಹಿರಿಯರು. ಬಹಳ ವರ್ಷಗಳಿಂದ ರಾಜಕಾರಣದಲ್ಲಿರುವವರು. ಅವರ ಅನುಭವ ಎಲ್ಲಿ ಹೋಯಿತು. ಅವರ ಅನುಭವದಿಂದ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದರೆ, ಜನ ಮೆಚ್ಚಿಕೊಳ್ಳುತ್ತಿದ್ದರು ಎಂದರು.
ಮತಾಂತರ ನಿಷೇಧ ಕಾಯ್ದೆ:ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಮಂಡನೆಯಾಗಲಿಲ್ಲ. ಈಗ ಮಂಡಿಸಲು ಸಾಧ್ಯವಾಗಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸದನ ವ್ಯವಸ್ಥಿತವಾಗಿಲ್ಲ. ಚರ್ಚೆ ಮಾಡಿ ಅಂಗೀಕರಿಸಲಾಗುವುದು ಎಂದರು. ಜೆ.ಪಿ ನಡ್ಡಾ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಅಧಿಕೃತ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು. ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅಥೆìçಸಿಕೊಂಡಿದ್ದಾರೆ. ಹೇಳಿಕೆಯ ಪೂರ್ಣ ಪಾಠವನ್ನು ತೆಗೆದುಕೊಂಡರೆ, ಅವರು ಯಾವುದೇ ಕಾನೂನಿನ ವಿರುದ್ಧವಾಗಲಿ, ರಾಷ್ಟ್ರಧ್ವಜವನ್ನು ಅಪಮಾನ ಮಾಡುವ ಯಾವುದೇ ವಿಚಾರವನ್ನು ಅವರು ಹೇಳಿಲ್ಲ. ಇದು ಬಹಳ ಸ್ಪಷ್ಟವಾಗಿದೆ. ಅದನ್ನು ತಿರುಚಿ ರಾಜಕೀಯವಾಗಿ ಬಳಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದರು. ಕಾಂಗ್ರಸ್ ಪಕ್ಷದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಅಷ್ಟಾದರೂ ಮಾಡಲಿ ಎಂದರು. ಮಾರ್ಚ್ 4 ರಂದು ಬಜೆಟ್ :
ಬಜೆಟ್ ಮಾರ್ಚ್ 04 ರಂದು ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.