Advertisement
ಸಂಡೂರು, ಶಿಗ್ಗಾಂವಿ ಕ್ಷೇತ್ರದ ಮತದಾರರಿಗೆ ರವಿವಾರ ಆಯೋಜಿಸಿದ್ದ ಅಭಿನಂದನ ಸಮಾರಂಭದಲ್ಲಿ ಮಾತನಾಡಿದ ಅವರು, 2013ರಲ್ಲಿ 122, 2023ರಲ್ಲಿ 136 ಸ್ಥಾನಗಳೊಂದಿಗೆ ಅಧಿ ಕಾರಕ್ಕೆ ಬಂದಿದ್ದ ನನ್ನ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಸುಭದ್ರವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿಗೆ ಒಮ್ಮೆಯೂ ಜನಾದೇಶ ಸಿಕ್ಕಿಲ್ಲ. ಎರಡು ಬಾರಿಯೂ “ಆಪರೇಷನ್ ಕಮಲ’ದ ಮೂಲಕವೇ ಅ ಧಿಕಾರಕ್ಕೆ ಬಂದಿದೆ. ಆದರೆ ಒಮ್ಮೆಯೂ ಸುಭದ್ರವಾಗಿ ಐದು ವರ್ಷ ಇರಲಿಲ್ಲ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ್ದರಿಂದ ಕೇಂದ್ರ ಸರಕಾರ ಹತಾಶಗೊಂಡು ತೊಂದರೆ ಕೊಡುತ್ತಿದೆ. ನಮಗೆ ನ್ಯಾಯಯುತವಾಗಿ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ತೆರಿಗೆ ಪಾಲು ಕೊಡುತ್ತಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಸರಿಯಾಗಿ ಹಣ ನೀಡುತ್ತಿಲ್ಲ. ಎಷ್ಟೇ ತೊಂದರೆ ಕೊಟ್ಟರೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಇದೇ ಗ್ಯಾರಂಟಿ ಯೋಜನೆಗಳ ಮೂಲಕ 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.