Advertisement
ಸುಮಾರು 100ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು. ಅದಕ್ಕೆ ಜೆ.ಕೆ.ವೆಂಕಟೇಶ್ ಅವರ ಕೈವಾಡವಿದೆ. ಕೂಡಲೇ ಅವರನ್ನು ಬಂಧಿಸ ಬೇಕು ಎಂದು ಪ್ರತಿಭಟನಾಕಾ ರರು ಒತ್ತಾಯಿಸಿದರು. ಪೊಲೀಸರು ಮನವೊಲಿಸಲು ಯತ್ನಿಸಿದ್ದು, ಆರೋಪಿತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ..
Related Articles
Advertisement
ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಪ್ರಚಾರ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಆರ್.ಆರ್.ನಗರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಅದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಈಗ ಅವರು ಯಾವ ರೀತಿ ಮೋಸ ಮಾಡಿ ದ್ರೋಹ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಠಾಣೆ ಮುಂದೆ ಹೈಡ್ರಾಮಾ: ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ವರೆಗೂ ಹೈಡ್ರಾಮ ನಡೆಯಿತು. ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿ ಪಡಿಸಿದ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್ ಬಂಧನಕ್ಕೆ ಆಗ್ರಹಿಸಿ ಕೈ ಕಾರ್ಯಕರ್ತರು ಪ್ರತಿಭಟಣೆ ನಡೆಸಿದರು. ಅಲ್ಲದೆ ಬಿಜೆಪಿ ಕಾರ್ಯತರ ಬಂಧನ ಆಗುವವರೆಗೂ ಸ್ಥಳದಿಂದ ಬೇರೆಡೆ ಹೋಗಲು ನಿರಾಕರಿಸಿದರು. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಧರಣಿ ಕೂರಲು ಮುಂದಾದರು.
ಈ ವೇಳೆ ಸಂಸದ ಡಿ.ಕೆ.ಸುರೇಶ್ ಯಶವಂತಪುರ ಠಾಣೆಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತರು ಪದೇ ಪದೆ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಎಸಿಪಿ ರೀನಾ ಸುವರ್ಣ ಅವರೊಂದಿಗೆ ಡಿ.ಕೆ.ಸುರೇಶ್ ಚರ್ಚೆ ನಡೆಸಿದರು.
ಕಾಂಗ್ರೆಸ್ ಮುನಿರತ್ನನ ಗೂಂಡಾಗಳಿಗೆ ಹೆದರುವುದಿಲ್ಲ. ಇದೇ ರೀತಿ ಮುಂದುವರೆದರೆ, ಬಿಜೆಪಿಯವರುಪ್ರಚಾರ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ. ಮುನಿರತ್ನ ರನ್ನು ಬಂಧಿಸದಿದ್ದರೆ ಠಾಣೆ ಎದುರು ಪ್ರತಿ ಭಟನೆ ನಡೆಸಬೇಕಾಗುತ್ತದೆ. ನ. 3 ರಂದು ತಕ್ಕ ಉತ್ತರ ನೀಡುತ್ತಾರೆ.– ಸಿದ್ದರಾಮಯ್ಯ, ಮಾಜಿ ಸಿಎಂ
ಕಾಂಗ್ರೆಸ್‌ನಿಂದ ದೂರು ಸಲ್ಲಿಕೆಯಾಗಿದೆ. ನೀತಿ ಸಂಹಿತೆ ಪ್ರಕಾರ ದೂರನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಐಟಿ ಇಲಾಖೆಗೆ ವರ್ಗಾಯಿಸಲಾಗಿದೆ. ದೂರನ್ನು ತನಿಖೆಗೆ ಒಳಪಡಿಸಲಾಗಿದೆ. – ಸಂಜೀವ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ