Advertisement

ಫೆ. 22-27: ಕಾಂಗ್ರೆಸ್‌ ಪಾದಯಾತ್ರೆ

01:30 AM Feb 20, 2021 | Team Udayavani |

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಫೆ. 22ರಿಂದ 27ರ ವರೆಗೆ “ಜನಧ್ವನಿ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಪಾದಯಾತ್ರೆ ಹೆಜಮಾಡಿ ಟೋಲ್‌ಗೇಟಿನಿಂದ ಪ್ರಾರಂಭಗೊಂಡು ಕಾಪು, ಕಟಪಾಡಿ, ಉಡುಪಿ, ಕಲ್ಯಾಣಪುರ, ಸಂತೆಕಟ್ಟೆ, ಬ್ರಹ್ಮಾವರ, ಕುಂದಾಪುರ, ಅರೆಹೊಳೆ, ಬೈಂದೂರಿನಲ್ಲಿ ಸಮಾರೋಪಗೊಳ್ಳಲಿದೆ. 108 ಕಿ.ಮೀ. ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ  ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಈ ರ್ಯಾಲಿ ನಡೆಯುತ್ತಿದ್ದು, ಅನಂತರ ಉಳಿದ ಜಿಲ್ಲೆಗಳಲ್ಲಿಯೂ ನಡೆಯಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next