Advertisement

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ 

12:50 PM Aug 16, 2022 | Team Udayavani |

ನೆಲಮಂಗಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರ ಪಡೆಯುವುದು ಶತಸಿದ್ಧ ಎಂದು ಕೆಪಿಸಿಸಿ ವೀಕ್ಷಕ ಶ್ರೀನಿವಾಸ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರ ಸಮೀಪದ ದಾಸನಪುರ ಹೋಬಳಿಯ ಮಾದವಾರ ಬಿಐಇಸಿ ಆವರಣದಲ್ಲಿ ಬೆಂಗಳೂರಿನ ಕಾಂಗ್ರೆಸ್‌ ಪಾದಯಾತ್ರೆಗೆ ತೆರಳಲು ಆಗಮಿಸಿದ್ದ ತಾಲೂಕಿನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ನಡೆಸುವ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸ್ವಇಚ್ಛೆಯಿಂದ ಸೇರುತ್ತಿರುವುದು ಮುಂದಿನ ಚುನಾವಣೆಯ ಯಶಸ್ಸಿಗೆ ಕಾರಣವಾಗಿದೆ ಎಂದರು.

5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು: ನಮ್ಮ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಕಾರ್ಯಕರ್ತರು ಬರುತ್ತಿರುವುದು ನೋಡಿದರೇ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ನೆಲಮಂಗಲದಲ್ಲೂ ಕೂಡ ಮುಖಂಡರ ಸಹಕಾರ ದೊಂದಿಗೆ 5 ಸಾವಿರಕ್ಕೂ ಹೆಚ್ಚು ಜನರು ಪಾದಯಾತ್ರೆ ಯಲ್ಲಿ ಭಾಗವಹಿಸಲು ಆಗಮಿಸಿರುವುದು ಸ್ವಾಗತಾರ್ಹ. ಅಧ್ಯಕ್ಷರ ಮಾರ್ಗದರ್ಶನದಲ್ಲಿ ಅಮೃತಮಹೋತ್ಸವದ ಬೃಹತ್‌ ಪಾದಯಾತ್ರೆ ನಡೆಸಿದ್ದು, ನಮ್ಮೆಲ್ಲರಿಗೂ ಮತ್ತಷ್ಟು ಕೆಲಸ ಮಾಡಲು ಪ್ರೇರಣೆಯಾಗಿದೆ ಎಂದರು.

ಮೆಟ್ರೋ ಪಯಣ ಉಚಿತ: ಕಾಂಗ್ರೆಸ್‌ ಪಾದಯಾತ್ರೆಗೆ ಬಂದ ಕಾರ್ಯಕರ್ತರು ಹಾಗೂ ಜನರಿಗೆ ಉಚಿತ ಟೀಶರ್ಟ್‌, ಟೋಪಿ, ಊಟ,ನೀರು, ಬಸ್‌ ಪಯಣದ ಜತೆ ನಾಗಸಂದ್ರದಿಂದ ಸಂಗೊಳ್ಳಿರಾ ಯಣ್ಣ ಮೆಟ್ರೋ ನಿಲ್ದಾಣದವರೆಗೂ ಉಚಿತ ಮೆಟ್ರೋ ಪಯಣಕ್ಕೆ ಆದ್ಯತೆ ನೀಡಲಾಗಿತ್ತು. ವಿಧಾನ ಪರಿಷತ್‌ ಸದಸ್ಯ ರವಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಡಾ. ರಂಗನಾಥ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೊನ್ನಸಿದ್ದಯ್ಯ, ಬೂದಿಹಾಳ್‌ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜು, ಜಗದೀಶ್‌, ಕಾನೂನು ಘಟಕ ಮನುಗೌಡ, ಅಸಂಘಟಿತ ಕಾರ್ಮಿಕ ವಿಭಾಗದ ಕನಕರಾಜು, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಗೌಡ, ಮುಖಂಡ ಸಿಎಂ ಗೌಡ್ರು, ರಂಗಸ್ವಾಮಿ, ಜಿ.ಎಚ್‌ ಗೌಡ್ರು, ಮಹಿಳಾ ಘಟಕದ ನಾಗರತ್ನಮ್ಮ ಹಾಗೂ ಮತ್ತಿತರರಿದ್ದರು.

30 ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ  : ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ನಾವೆಲ್ಲರೂ ಭಾಗಿಯಾಗುತ್ತಿದ್ದು, ಸಂತೋಷ ತಂದಿದೆ. ತಾಲೂಕಿನಿಂದ ಎನ್‌. ಶ್ರೀನಿವಾಸ್‌ ನೇತೃತ್ವದಲ್ಲಿ 5 ಸಾವಿರ ಜನರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ವಿವಿಧ ಪ್ರದೇಶದಿಂದ ಬರುತ್ತಿರುವ 30 ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದು ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರಿ ಮೂರ್ತಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next