Advertisement

ಕಾಂಗ್ರೆಸ್- ಪಾಕಿಸ್ತಾನದ ಭಾಷೆ ಒಂದೇ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ

03:08 PM Mar 18, 2023 | keerthan |

ವಿಜಯಪುರ: ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ನಿಗ್ರಹ, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಪಡಿಸಿದಾಗ ಕಾಂಗ್ರೆಸ್ ಹಾಗೂ ಪಾಕಿಸ್ತಾನ ಎರಡೂ ಕರಾಳದಿನ ಎಂದಿದ್ದವು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದ್ದಾರೆ.

Advertisement

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿದೇಶಿ ಶಕ್ತಿಗಳ ಮೇಲೆ ಭಾರಿ ನಂಬಿಕೆ ಇರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಮಾಡುತ್ತದೆ. ಭಾರತದ ಮೇಲೆ ಅಪಘಾನಿಸ್ಥಾನದವರು ದಂಡೆತ್ತಿ ಬರಬೇಕು ಎಂದು ಟಿಪ್ಪು ಪತ್ರ ಬರೆದಿದ್ದ. ಕಾಶ್ಮೀರದಲ್ಲಿ ಸಂವಿಧಾನದ 370 ವಿಧಿ ತೆರವು ಮಾಡಿದಾಗ ಕಾಂಗ್ರೆಸ್ ಇದೇ ರೀತಿ ಮಾತನಾಡಿತ್ತು. ಈಗ ವಿದೇಶಿ ನೆಲದಲ್ಲಿ ನಿಂತು ಭಾರತದ ಎಲೆಕ್ಟೆಡ್ ಲೀಡರ್ ಮೋದಿ ಬಗ್ಗೆ ಸೆಲೆಕ್ಟೆಡ್ ಲೀಡರ್ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕರ ಇಂಥ ವರ್ತನೆಯಿಂದಲೇ ದೇಶದಲ್ಲಿ ಜನರು ಆ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಇಡೀ ಈಶಾನ್ಯ ಭಾರತದಲ್ಲಿ ಒಂದು ಕ್ಷೇತ್ರದಲ್ಲೂ ಕಾಂಗ್ರೆಸ್ ಸಂಸದರಿಲ್ಲ, ಎಲ್ಲ ಕಡೆ ಸೋತು ಸುಣ್ಣವಾಗಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ಹಾಗೂ ಪಾಕ್ ಪ್ರೇರಿತ ಉಗ್ರವಾದದ ವಿರುದ್ಧ ಭಾರತ ನಿಯಂತ್ರಿಸಲು ಯತ್ನಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಪಾಕಿಸ್ತಾನದ ಜೊತೆ ಒಳ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ದೂರದ ಸ್ವಿಡ್ಜರ್‌ಲ್ಯಾಂಡ್‌ನಲ್ಲೂ ದೈವಾರಾಧನೆಯ ಗಗ್ಗರದ ಸದ್ದು

ಭಾರತ ಪ್ರಜಾಸತ್ತಾತ್ಮಕ ಸ್ವತಂತ್ರ ಗಣರಾಜ್ಯ ದೇಶ. ಆದರೆ ಕಳೆದ 35 ವರ್ಷಗಳ ಬಳಿಕ ಕಾಂಗ್ರೆಸ್‌ ಪಕ್ಷವನ್ನು ದೇಶದ ಜನ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವಿದೇಶದ ಮೇಲೆ ಬಹಳ ವಿಶ್ವಾಸವಿದೆ. ಅಮೆರಿಕ, ಯುರೋಪ್ ಯುನಿಯನ್ ಭಾರತದಲ್ಲಿ ಮಧ್ಯಪ್ರವೇಶ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡುವ ಮೂಲಕ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ನಾವು ಎಸ್ ಡಿಪಿಐ ಅಧ್ಯಕ್ಷರು ಕೂಡಾ ಸ್ಪಷ್ಟವಾಗಿ ಹೇಳಿದ್ದಾರೆ. ಪುಷ್ಟೀಕರಣ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಎಸ್.ಡಿ.ಪಿ‌.ಐ. ಪಕ್ಷದೊಂದಿಗೆ ಒಪ್ಪಂದಕ್ಕೆ ಮುಂದಾಗಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next