Advertisement

ಹಂಡಿತವಳ್ಳಿ ಗ್ರಾಮಸ್ಥರು  ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

12:57 PM Oct 10, 2021 | Team Udayavani |

ಪಿರಿಯಾಪಟ್ಟಣ: ತಾಲ್ಲೂಕಿನ ಹಂಡಿತವಳ್ಳಿ ಹಾಗೂ ನಾಗರಘಟ್ಟ ಗ್ರಾಮದ ನೂರಾರು ಜೆಡಿಎಸ್ ಮುಖಂಡರು ಮಾಜಿ ಶಾಸಕ ಕೆ.ವೆಂಕಟೇಶ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

Advertisement

ತಾಲ್ಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಪ್ರತಿನಿಧಿ ಸಭಾ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ದಶರಥ್ ಶೆಟ್ಟಿ, ನಂದೀಶ್, ಜವರಯ್ಯ, ಮಲ್ಲೇಶ್, ಸುಬ್ರಹ್ಮಣ್ಯ, ಸತೀಶ್, ಕುಮಾರ್, ಗಿರೀಶ್, ರಾಮಚಂದ್ರ, ನವೀನ್ ಸೇರಿದಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟಲು ಪಣತೂಟ್ಟಿದೆ. ಜಾತ್ಯತೀತ ನಿಲುವು ಹೂಂದಿರುವ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ನಂಬಿ ಪಕ್ಷಕ್ಕೆ ಬಂದಿರುವುದು ಅತೀವ ಸಂತಸವಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು  ಎಂದರು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮುತ್ತುರಾಣಿ, ಮುಖಂಡರಾದ ಪುಟ್ಟಸ್ವಾಮಿ ಶೆಟ್ಟಿ, ಸರೋಜಮ್ಮ, ಪುಟ್ಟರಾಜು, ರಾಮಶೆಟ್ಟಿ, ಮಹೇಂದ್ರಕುಮಾರ್, ಪರಶಿವ ಮೂರ್ತಿ, ಮುರುಳೀಧರ್, ಗಂಗಾಧರ್, ಮಂಜು, ಗಿರೀಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next