Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಮೂಡುಬಿದಿರೆ, ಮೂಲ್ಕಿ ಹಾಗೂ ಸುಳ್ಯ ಪಟ್ಟಣ ಪಂಚಾಯತ್‌ಗಳಿಗೆ ಚುನಾವಣೆ ನಿಗದಿಯಾಗಿದೆ. ಮೂರು ಕಡೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಗರವನ್ನು ಸರ್ವತೋಮುಖ ಅಭಿವೃದ್ಧಿ ಮಾಡುವ ಸಲುವಾಗಿ ರಾಜ್ಯ ಸರಕಾರದಿಂದ ಅನುದಾನ ತರಿಸಲಾಗುವುದು ಎಂದು ಹೇಳಿದರು.
ಸುಳ್ಯದಲ್ಲಿ ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಕುಡಿಯುವ ನೀರಿಗೆ ಶಾಶ್ವತ ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಈ ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ವೆಂಟೆಡ್ ಡ್ಯಾಂ ನಿರ್ಮಿಸಿ ಪಟ್ಟಣಕ್ಕೆ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು. 13-14 ಸ್ಥಾನ
ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ 13ರಿಂದ 14 ಸ್ಥಾನಗಳನ್ನು ಗೆದ್ದು ಆಡಳಿತಕ್ಕೆ ಬರಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಹೇಳಿದರು.
Related Articles
Advertisement
ವರದಿ ಬಂದ ಮೇಲೆ ಕ್ರಮಒಂದು ಕ್ಷೇತ್ರದಲ್ಲಿ ಒಬ್ಬರಿಗೆ ಮಾತ್ರ ಸ್ಪರ್ಧಿಸಲು ಸಾಧ್ಯವಾಗುವುದು. ಆಕಾಂಕ್ಷಿಗಳು ಹಲವು ಮಂದಿ ಇರಬಹುದು. ಅವಕಾಶ ಸಿಗದವರು ಅಸಮರ್ಥರು ಎಂದು ಅರ್ಥವಲ್ಲ. ಬಂಡಾಯವಾಗಿ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ನಾಯಕರು ಮಾತನಾಡಿದ್ದಾರೆ. ಆದರೆ ಕೆಲವರು ನಾಮಪತ್ರ ವಾಪಸ್ ಪಡೆದಿಲ್ಲ. ಈ ವಿದ್ಯಮಾನಗಳ ಕುರಿತು ಬ್ಲಾಕ್ ಅಧ್ಯಕ್ಷರು ವರದಿ ಸಲ್ಲಿಸುತ್ತಾರೆ. ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು.