ಪಣಜಿ : 2022 ರಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಎಲ್ಲ 40 ವಿಧಾನಸಭಾ ಕ್ಷೇತ್ರಗಳ “ಯುದ್ಧಕ್ಕೆ ಕಾಂಗ್ರೆಸ್ ಸಿದ್ಧವಾಗಿದೆ” ಎಂದು ಕಾಂಗ್ರೆಸ್ ಗೋವಾ ಉಸ್ತುವಾರಿ ಪಿ.ಚಿದಂಬರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಸೂಕ್ತ ಸಮಯದಲ್ಲಿ ಕೈಗೊಳ್ಳಲಾಗುವುದು. ಗೋವಾ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಫರ್ಧಿಸಲು ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ವಾತಾವರಣ ಅತ್ಯಂತ ಅನುಕೂಲಕರವಾಗಿದೆ. ಮುಂಬರುವ ವಿಧಾನ ಸಭಾ ಚುನಾವಣೆಯ ನಂತರ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪಿ. ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮೊಘಲರು ದುಷ್ಟರಲ್ಲ : ಬಾಲಿವುಡ್ ನಿರ್ದೇಶಕ ಕಬೀರ್ ಖಾನ್ ಹೇಳಿಕೆ
ರಾಜ್ಯದಲ್ಲಿ ಸದ್ಯ ಇರುವ ಸರ್ಕಾರ ಬದಲಾವಣೆಯಾಗಲೇ ಬೇಕು ಎಂಬುದು ಗೋವಾ ಜನರ ನಿರೀಕ್ಷೆಯಾಗಿದೆ, ಕಾಂಗ್ರೆಸ್ ಪಕ್ಷವು ಅವರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ನಿಷ್ಠಾವಂತ, ಕಠಿಣ ಪರಿಶ್ರಮ, ಗೋವಾದ ಜನರ ಹಿತಾಸಕ್ತಿಯನ್ನು ಪೂರೈಸಲು ಸಿದ್ಧವಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಂಚಿತವಾಗಿ ಘೋಷಿಸುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮೌನತಾಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್, ಗೋವಾ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಗೋವಾ ಕಾಂಗ್ರೆಸ್ ಪ್ರದೇಶ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣಕರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಂಡೀಪುರ ಹೆದ್ದಾರಿ ಅಗಲೀಕರಣಕ್ಕೆ ಅವಕಾಶ ಕೊಡುವುದಿಲ್ಲ: ಅರಣ್ಯ ಸಚಿವ ಉಮೇಶ್ ಕತ್ತಿ