Advertisement

ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿಗೆ: ಮಾಜಿ ಶಾಸಕ ಕೆ.ವೆಂಕಟೇಶ್ ಚಾಲನೆ

07:19 PM Dec 11, 2021 | Team Udayavani |

ಪಿರಿಯಾಪಟ್ಟಣ: ಪಟ್ಟಣದ ಕಾಂಗ್ರೆಸ್ ಪಕ್ಷದ ಪಟ್ಟಣದ ಕಚೇರಿಯಲ್ಲಿ ಶನಿವಾರ  ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಮಾಜಿ ಶಾಸಕ ಕೆ.ವೆಂಕಟೇಶ್  ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ ಆದೇಶದ ಮೇರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಇಂದಿನಿಂದ ಚಾಲನೆ ನೀಡಲಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ ಹಂತದ ನಾಯಕರು ಹಾಗೂ ಕಾರ್ಯಕರ್ತರು ಪ್ರಾಥಮಿಕ ಸದಸ್ಯತ್ವ ಪಡೆಯಲು ಆದೇಶಿಸಲಾಗಿದೆ. ಇದರ ಅಂಗವಾಗಿ ರಾಜಧಾನಿ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಮೈಸೂರಿನಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನವರು ವಿಡಿಯೋ ಕಾನ್ಪರೆನ್ಸ್ ಮೂಲಕ ಸದಸ್ಯತ್ವ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಪಿರಿಯಾಪಟ್ಟಣ ತಾಲೂಕಿನಲ್ಲಿ 50 ಸಾವಿರ ಸದಸ್ಯರನ್ನು ನೊಂದಣಿ ಮಾಡುವ ಗುರಿ ಹೊಂದಲಾಗಿದೆ ಎಂದರು.

ಈ ಸದಸ್ಯತ್ವ ಅಭಿಯಾನ ಇಂದು ಆರಂಭವಾಗಿ ಮಾರ್ಚ್ 31 ರವರೆಗೂ ಸದಸ್ಯತ್ವ ನೋಂದಣಿ ಕಾರ್ಯ ನಡೆಯಲಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು ಸದಸ್ಯತ್ವ ಪಡೆಯಬೇಕು. 2023ರ ವಿಧಾನಸಭೆ ಚುನಾವಣೆಯನ್ನು ಗುರಿಯನ್ನಾಗಿಟ್ಟುಕೊಂಡು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಈ ಅಭಿಯಾನವನ್ನು ಆರಂಭಿಸಲಾಗಿದ್ದು ರಾಜ್ಯದ 2 ಸಾವಿರ ಸ್ಥಳಗಳಲ್ಲಿ ಏಕಕಾಲದಲ್ಲಿ ಆರಂಭವಾಗಿದೆ, ಆಯಾ ಭಾಗದ ಪಕ್ಷದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿ ಸದಸ್ಯತ್ವ ಪಡೆಯುತ್ತಿದ್ದಾರೆ. ಸದಸ್ಯತ್ವ ನೋಂದಣಿಯಲ್ಲಿ ಉತ್ತಮ ಸಾಧನೆ ಮಾಡುವವರಿಗೆ ಪಕ್ಷದ ಪ್ರಮುಖ ಸ್ಥಾನಮಾನಗಳನ್ನು ನೀಡುವ ಭರವಸೆಯನ್ನು ಪಕ್ಷದ ಮುಖಂಡರು ನೀಡಿದ್ದಾರೆ ಆದ್ದರಿಂದ ತಾಲ್ಲೂಕಿನಲ್ಲಿ ಉತ್ಸಾಹಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೊಂದಣಿ ಮಾಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ ಮಾತನಾಡಿ ಪಿರಿಯಾಪಟ್ಟಣ ಟೌನ್ ಸೇರಿದಂತೆ ತಾಲೂಕಿನ ರಾವಂದೂರು, ಕಂಪಲಾಪುರ,  ಮಾಕೋಡು, ಹಿಟ್ನೆಹೆಬ್ಬಾಗಿಲು, ಬೆಟ್ಟದಪುರ, ಕಿತ್ತೂರು,  ಕೊಪ್ಪ, ಬೈಲುಕುಪ್ಪೆ, ಚಿಕ್ಕನೇರಳೆ, ಸಂತೆಮಾಳ ಸೇರಿದಂತೆ ತಾಲ್ಲೂಕಿನ 10 ಕೇಂದ್ರಗಳಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದರು.

Advertisement

ಈ ಸಂದರ್ಭದಲ್ಲಿ ಪಕ್ಷದ ಖಜಾಂಚಿ ಬಸವರಾಜು, ಎಸ್ಸಿ ಘಟಕ್ ಅಧ್ಯಕ್ಷ ಪಿ.ಮಹದೇವ್, ಪಿರಿಯಾಪಟ್ಟಣ ತಾಲ್ಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಜೆ.ಮೋಹನ್, ಮುಖಂಡರಾದ ಪ್ರಕಾಶ್, ರವಿ, ಮಂಜುನಾಥ್, ಅನಿಲ್ ಕುಮಾರ್,  ಶ್ಯಾಮ್, ಚಾಮರಾಜ್, ಎ.ಕೆ.ಗೌಡ, ಶಿವರುದ್ರ, ಮುತ್ತುರಾಜ್, ತೆಲುಗಿನಕುಪ್ಪೆ ನಾಗಣ್ಣ, ಮಹೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next