Advertisement

Congress ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್‌ ಪಕ್ಷ ಶಕ್ತಿ ಪ್ರದರ್ಶನ

01:43 AM Aug 31, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸಹಿತ ವರ್ಷದಿಂದ ಬಾಕಿ ಉಳಿಸಿಕೊಂಡಿರುವ ವಿಪಕ್ಷ ನಾಯಕರ ಪ್ರಕರಣಗಳ ವಿರುದ್ಧವೂ ಅಭಿಯೋಜನೆಗೆ ಅನುಮತಿ ನೀಡುವಂತೆ ಕಾಂಗ್ರೆಸ್‌ ಶನಿವಾರ ರಾಜಭವನ ಚಲೋ ಹಮ್ಮಿಕೊಂಡಿದೆ.

Advertisement

ಈ ಮೂಲಕ ರಾಜ್ಯಪಾಲರ ನಡೆಯ ವಿರುದ್ಧ ಮತ್ತೂಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.
ಬೆಳಗ್ಗೆ 10.30ಕ್ಕೆ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಹೊರಡಲಿರುವ ಪ್ರತಿಭಟನೆ ಮೆರ ವಣಿಗೆ ರಾಜಭವನದಲ್ಲಿ ಅಂತ್ಯಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಈ ಹೋರಾಟದ ನೇತೃತ್ವ ವಹಿಸಲಿದ್ದಾರೆ. ಎಲ್ಲ ಸಚಿವರು, ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಸಿಎಂ ವಿರುದ್ಧ ಅಭಿಯೋಜನೆಗೆ ತ್ವರಿತಗತಿಯಲ್ಲಿ ಅನುಮತಿ ನೀಡಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಈ ಪ್ರತಿಭಟನೆಯಲ್ಲಿ ಬಣಗಳ ಭಿನ್ನರಾಗಗಳನ್ನು ಬದಿಗೊತ್ತಿ ಎಲ್ಲ ನಾಯಕರು ಭಾಗವಹಿಸುವ ಮೂಲಕ ಸಿದ್ದರಾಮಯ್ಯ ಪರ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಲಿದ್ದಾರೆ.

“ಬಾಕಿ ಉಳಿದ ಎಲ್ಲ ಪ್ರಕರಣಗಳ ವಿಚಾರಣೆಗೂ ಅನುಮತಿ ಕೊಡಿ, ಇಲ್ಲವಾದರೆ ಸಿಎಂ ವಿರುದ್ಧ ಅಭಿ ಯೋಜನೆಗೆ ನೀಡಿರುವ ಅನುಮತಿ ಯನ್ನು ಹಿಂಪಡೆಯಿರಿ’ ಎಂಬುದು ಪ್ರಮುಖ ಬೇಡಿಕೆ ಆಗಿರಲಿದೆ.

Advertisement

ರಾಜ್ಯಪಾಲರಿಂದ ಭೇಟಿಗೆ ಅನುಮತಿ: ಡಿಕೆಶಿ
ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದೆವು. ಈಗಾ ಗಲೇ ಸಮಯ ಕೊಟ್ಟಿದ್ದಾರೆ. ಶನಿವಾರ ಎಲ್ಲ ಶಾಸಕರು, ಸಂಸದರು, ಮುಂಚೂಣಿ ನಾಯಕರಿಗೆ ಸೂಚನೆ ನೀಡಲಾಗಿದ್ದು, ಎಲ್ಲರೂ ಭಾಗವಹಿಸಲಿದ್ದಾರೆ ಎಂದರು.

ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ- ಜೆಡಿಎಸ್‌
ಪಕ್ಷಗಳ ಸೇಡು, ಹೊಟ್ಟೆಕಿಚ್ಚಿನ ಪಿತೂರಿಯನ್ನು ಸಹಿಸಬೇಡಿ. ಜನರ ಆಶೀರ್ವಾದ ಇರುವವರೆಗೆ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ. ಮೊದಲ ಬಾರಿ ಸಿಎಂ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕಿದ್ದೇನೆ. 2ನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಮುಡಾ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಸರಿಯಲ್ಲ. ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಬಗ್ಗೆ ಹೇಳಿದ್ದೇವೆ. ಆದರೂ ಯಾವುದೇ ತೀರ್ಮಾನ ಮಾಡಲಿಲ್ಲ. ಇದು ಎಷ್ಟು ಸರಿ ಎಂದು ಕೇಳುತ್ತೇವೆ. ಇದಕ್ಕೆ ಸ್ಪಂದಿಸದಿದ್ದರೆ ರಾಷ್ಟ್ರಪತಿಗಳ ಮೊರೆಹೋಗುತ್ತೇವೆ.
-ಡಾ| ಪರಮೇಶ್ವರ್‌, ಗೃಹಸಚಿವ

 

Advertisement

Udayavani is now on Telegram. Click here to join our channel and stay updated with the latest news.

Next