Advertisement
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಚುನಾವಣಾ ಪ್ರಚಾರ ದಲ್ಲಿಯೂ ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ತಾವುನಿಲ್ಲಿಸಿದಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದು ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಕಸರತ್ತು ನಡೆದಿದ್ದು ಗುಟ್ಟಾಗಿ ಉಳಿಯಲಿಲ್ಲ. ಉಪ ಚುನಾವಣೆ ಫಲಿತಾಂಶದಿಂದ ರಾಜ್ಯ ರಾಜಕೀಯದಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ಎನ್ನುವ ಸತ್ಯದ ಅರಿವಿದ್ದರೂ, ಇಬ್ಬರೂ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಪಕ್ಷದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಕಡೆಗೆ ಹೆಚ್ಚಿನ ಆದ್ಯತೆ ನೀಡಿದಂತೆಕಂಡು ಬಂದಿತು.
Related Articles
Advertisement
ಉಪ ಚುನಾವಣೆಯಲ್ಲಿ ಬಹುತೇಕ ಆಡಳಿತ ಪಕ್ಷದ ಕಡೆಗೆ ಮತದಾರರ ಒಲವಿರುವುದು ಹಾಗೂ ಹಣ ಮತ್ತು ಅಧಿಕಾರದ ಪ್ರಭಾವದಿಂದ ಗೆಲುವು ಸಾಧಿಸಿದೆ ಎನ್ನುವುದು ಸಾಮಾನ್ಯವಾದರೂ, ಸರ್ಕಾರ ಸರಿದಾರಿಯಲ್ಲಿ ಹೋಗುತ್ತಿಲ್ಲ ಎನ್ನುವುದನ್ನು ತೋರಿಸಲು ಉಪ ಚುನಾವಣೆಯ ಫಲಿತಾಂಶ ಪ್ರತಿಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿರುತ್ತದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಆಡಳಿತ ಪಕ್ಷದ ನಡೆಗಳು ಹಾಗೂ ತೀರ್ಮಾನಗಳಿಗೆ ಜನರ ಸಮ್ಮತಿ ಇದೆ ಎನ್ನುವುದನ್ನು ಬಿಂಬಿಸಿದಂತಾಗುತ್ತದೆ. ಹೀಗಾಗಿ ಪ್ರತಿಪಕ್ಷದಲ್ಲಿದ್ದಾಗಲೇ ಉಪ ಚುನಾವಣೆಗಳನ್ನು ಗೆಲ್ಲುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸುವ ಅವಕಾಶವನ್ನು ಕಾಂಗ್ರೆಸ್ ನಾಯಕರು ತಮ್ಮ ಪ್ರತಿಷ್ಠೆಯಿಂದಾಗಿ ಕಳೆದುಕೊಂಡಂತಾಗಿದೆ.
ಭವಿಷ್ಯಕ್ಕೆ ಉತ್ತಮ : ಉಪ ಚುನಾವಣೆಯ ಫಲಿತಾಂಶ ಡಿ.ಕೆ. ಶಿವಕುಮಾರ್‌ಗೆ ಭವಿಷ್ಯದಲ್ಲಿ ತೆಗೆದುಕೊಳ್ಳುವ ನಿರ್ಧಾರ ಮತ್ತು ನಡವಳಿಕೆಗಳ ಮೇಲೆ ಪರಿಣಾಮ ಬೀರಬಹುದು. ಈ ಬಗ್ಗೆ ಅವರು ಗಂಭೀರವಾಗಿ ಆಲೋಚಿಸುವುದುಕೂಡ ಅವರ ರಾಜಕೀಯ ಭವಿಷ್ಯಕ್ಕೆ ಉತ್ತಮ ಎಂಬ ಮಾತುಗಳುಕೇಳಿ ಬರುತ್ತಿವೆ.
– ಶಂಕರ ಪಾಗೋಜಿ