ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಅನುಕಂಪದ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.
ತಾಲೂಕಿನ ಹಿರೇಬಾಗೇ ವಾಡಿ ಗ್ರಾಮದ ಫಡಿಬಸ ವೇಶ್ವರ ಮಂದಿರ ಹತ್ತಿರ ಮೈದಾನದಲ್ಲಿ ಸೋಮವಾರ ನಡೆದ ರೈತ ಮೋರ್ಚಾ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ತರಲು ಯಡಿಯೂರಪ್ಪ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರನ್ನು ಯಾವ ದುಷ್ಟ ಶಕ್ತಿಯೂ ತಡೆಯಲು ಸಾಧ್ಯವಿಲ್ಲ. ಲಿಂಗಾಯತರನ್ನು ಒಡೆಯುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ವಾಗ್ಧಾಳಿ ನಡೆಸಿದರು.
ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ 49 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ ಯೋಜನೆ ನೀಡಿದ್ದಾರೆ. ನಮ್ಮ ಸರಕಾರ ಡಿಎಪಿಗೆ ಸುಮಾರು 2 ಸಾವಿರ ರೂ. ಸಬ್ಸಿಡಿ ನೀಡುತ್ತಿದೆ ಎಂದು ವಿಜಯೇಂದ್ರ ಅವರು ಹೇಳಿದರು.