ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗುತ್ತಿರುವ ಸಂದರ್ಭ ಕೋಮು ಗಲಭೆ ಸೃಷ್ಟಿಸಲು ಕಾಂಗ್ರೆಸ್ ಯೋಜನೆ ಹಾಕಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿ ದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವುದು ಕಾಂಗ್ರೆಸ್ ಮನಸ್ಥಿತಿ. ಕಾಂಗ್ರೆಸ್ ಅ ಧಿಕಾರಕ್ಕೆ ಬಂದಾಗಲೆಲ್ಲ ದೇಶದಲ್ಲಿ ಭಯೋತ್ಪಾದನೆ ಕೃತ್ಯಗಳು ನಡೆದಿವೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದಕ್ಕೆ ಸಂಪೂರ್ಣ ಕಡಿವಾಣ ಬಿದ್ದಿದ್ದು, ದೇಶ ಶಾಂತವಾಗಿದೆ ಎಂದರು.
ಲೋಕಸಭೆ ಚುನಾವಣೆ ವೇಳೆ ಬಿಜೆಪಿಯವರು ಹಿಂದೂ ಕಾರ್ಯಕರ್ತರನ್ನು ಮುಂದೆ ಬಿಟ್ಟು, ವಿಧ್ವಂಸಕ ಕೃತ್ಯ ಸೃಷ್ಟಿ ಮಾಡುತ್ತಿದ್ದಾರೆಂದ ಬಿ.ಕೆ.ಹರಿಪ್ರಸಾದ್ ವಿರುದ್ಧ ಹರಿಹಾಯ್ದ ಕರಂದ್ಲಾಜೆ, ಅವರ ಹೇಳಿಕೆಯು ಕಾಂಗ್ರೆಸ್‌ನ ಗಲಭೆ ಸಂಚಿನ ಒಂದು ಭಾಗ ಎಂದರು.
ಕಾಂಗ್ರೆಸ್‌ನಿಂದ ದೇಶದ್ರೋಹಿಗಳ ರಕ್ಷಣೆ ಪಿಎಫ್‌ಐನಂತಹ ದೇಶದ್ರೋಹಿ, ಭಯೋತ್ಪಾದಕರ ಕೇಸ್‌ಗಳನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಹಿಂಪಡೆಯುವುದು ಕಾಂಗ್ರೆಸ್ ಸರಕಾರದ ರಾಜಕೀಯ ನೀತಿ. ದೇಶಭಕ್ತರು, ರಾಮಮಂದಿರಕ್ಕಾಗಿ ಹೋರಾಟ ಮಾಡಿದವರಿದ್ದರೆ ಪ್ರಕರ ಣದ ಮರು ತನಿಖೆ ಮಾಡುತ್ತಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚು ನಡೆದಿದ್ದರೂ, ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ದೇಶದ್ರೋಹಿಗಳ ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದರು.
2013-17ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವಿತ್ತು. 2017ರಲ್ಲಿ ದತ್ತಜಯಂತಿ ಸಂದರ್ಭ ಚಿಕ್ಕಮಗಳೂರು ನಗರದಲ್ಲಿ ಸಿಕ್ಕ ಪೆಟ್ರೋಲ್ ಬಾಂಬ್ ಪ್ರಕರಣ ಮುಚ್ಚಿ ಹಾಕಿದ್ದರಲ್ಲಿ ಆಶ್ಚರ್ಯವೇನಿಲ್ಲ. ಇದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ಸ್ವಭಾವ ಎಂದರು.