Advertisement

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

02:23 AM Nov 27, 2024 | Team Udayavani |

ಬೆಂಗಳೂರು: ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ದಿಲ್ಲಿ ಪ್ರವಾಸ ಕೈಗೊಂಡಿದ್ದು, ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

Advertisement

ಝಾರ್ಖಂಡ್‌ನ‌ ಹೇಮಂತ್‌ ಸೊರೇನ್‌ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿರುವ ಡಿಸಿಎಂ, ಇದೇ ವೇಳೆ ಹೈಕಮಾಂಡ್‌ ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳೂ ಈ ಸಂದರ್ಭದಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಯೋಜನೆ ವಿಚಾರವಾಗಿ ನಾನು ದಿಲ್ಲಿಗೆ ಭೇಟಿ ನೀಡುತ್ತಿದ್ದೇನೆ. ಇದಕ್ಕಾಗಿ ಕೇಂದ್ರ ಸಚಿವರು ಮತ್ತು ಆ ಭಾಗದ (ಉತ್ತರ ಕರ್ನಾಟಕದ) ಸಂಸದರನ್ನು ಭೇಟಿಯಾಗಲಿದ್ದೇನೆ. ಜತೆಗೆ ಝಾರ್ಖಂಡ್‌ನ‌ಲ್ಲಿ ಹೇಮಂತ್‌ ಸೊರೇನ್‌ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದರು.

ಸಹಕಾರ ಬಳಸಿಕೊಳ್ಳುತ್ತೇವೆ
ಆದಷ್ಟು ಬೇಗ ಮಹದಾಯಿ ಯೋಜನೆಗೆ ಅನುಮತಿ ನೀಡುತ್ತೇವೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಮಹದಾಯಿ ಯೋಜನೆಗೂ ಅನುಮತಿ ಕೊಡಿಸಲಿ, ಮಾನ್ಯ ದೇವೇಗೌಡರು ಮೇಕೆದಾಟು ಯೋಜನೆಗೂ ಅನುಮತಿ ಕೊಡಿಸುವುದಾಗಿ ಹೇಳಿದ್ದು, ಅದನ್ನೂ ಕೊಡಿಸಲಿ. ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲು ಸಹಕಾರ ಕೊಟ್ಟರೆ ನಾವು ಅದನ್ನು ಬಳಸಿಕೊಳ್ಳಲು ಸಿದ್ಧ ಎಂದು ತಿಳಿಸಿದರು.

ಹೈಕಮಾಂಡ್‌ ನಾಯಕರ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ಖಂಡಿತ, ಕಾಂಗ್ರೆಸ್‌ ಕಚೇರಿ ನಮ್ಮ ಪಾಲಿನ ದೇವಾಲಯ. ಅಲ್ಲಿಗೆ ಹೋದ ಮೇಲೆ ನಾಯಕರನ್ನು ಭೇಟಿ ಮಾಡುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next