Advertisement
ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಜಾಧ್ವನಿ ಬಸ್ ರ‍್ಯಾಲಿಗೆ ಚಾಲನೆ ನೀಡಿದರು.
Related Articles
Advertisement
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ಐತಿಹಾಸಿಕವಾದ ಬೆಳಗಾವಿ ಸ್ಥಳಕ್ಕೆ ಭೇಟಿ ಮಾಡಿ ಕರ್ನಾಟಕ ಜನತೆಯ ನೋವು, ಅವರ ಅಭಿಪ್ರಾಯವನ್ನು ಜನರ ಮುಂದೆ ಇಡುವ ಕಾರ್ಯಕ್ರಮ ಪ್ರಜಾ ಧ್ವನಿಯ ಯಾತ್ರೆ. ಮಹಾತ್ಮ ಗಾಂಧಿಯವರ 1924ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಟ ಮಾಡಲು ಬೆಳಗಾವಿಯ ವೀರಸೌಧದಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ನಾಯಕತ್ವ ವಹಿಸಿ ಬ್ರಿಟಿಷರನ್ನು ಭಾರತದಿಂದ ಓಡಿಸಲು ರೂಪರೇಷೆ ಹಾಕಿದ್ದರು. ಅದೇ ರೀತಿ ನಾವು ರಾಜ್ಯ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತು ಹಾಕಬೇಕೆಂದು ವೀರಸೌಧದ ಗಾಂಧಿ ಬಾವಿಯಿಂದ ನೀರು ತೆಗೆದು ಹೆಣ್ಣು ಮಕ್ಕಳು ಕಾಯ್ದಕೊಂಡಿದ್ದಾರೆ. ಇಲ್ಲಿಂದ ನೀರು ಹಾಕಿ ರಾಜ್ಯವನ್ನು ತೊಳೆಯುವ ಕೆಲಸ ಮಾಡುತ್ತೇವೆ ಎಂದರು.
ಬೆಳಗಾವಿಯಲ್ಲಿ ನೆರೆ ಬಂದಾಗ ಯಾವ ಮಂತ್ರಿ ಬಂದಿದ್ದರು. ಬೆಳಗಾವಿಗೆ ಸಾಕಷ್ಟು ಕೊಡುಗೆ ನೀಡಿದ್ದ ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕೊರೊನಾದಿಂದ ಮೃತಪಟ್ಟ ಸಂದರ್ಭದಲ್ಲಿ ಅವರ ದೇಹ ತಂದು ಕೊಡಲು ಸರ್ಕಾರಕ ಆಗಲಿಲ್ಲ ಎಂದು ಹರಿಹಾಯ್ದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಬಸವರಾಜ ರಾಯರೆಡ್ಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ, ಅಂಜಲಿ ನಿಂಬಾಳ್ಕರ್, ಚನ್ನರಾಜ ಹಟ್ಟಿಹೊಳಿ, ಮಹಾಂತೇಶ ಕೌಜಲಗಿ, ಪಿ.ಟಿ. ಪರಮೇಶ್ವರ ನಾಯಕ, ಆರ್. ವಿ. ದೇಶಪಾಂಡೆ, ವಿನಯ ಕುಲಕರ್ಣಿ, ಡಿ.ಬಿ. ಇನಾಮದಾರ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.