Advertisement

Politics: ದಿಲ್ಲಿ ಹೋರಾಟಕ್ಕೆ ಕಾಂಗ್ರೆಸ್‌ ತಯಾರಿ

12:27 AM Feb 05, 2024 | Team Udayavani |

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿ ದಿಲ್ಲಿಯಲ್ಲಿ ಹೋರಾಟ ಕ್ಕಿಳಿಯಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್‌ ಫೆ. 7ರಂದು ಸಂಸತ್‌ ಭವನದ ಎದುರು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದೆ. ಜತೆಗೆ, “ನನ್ನ ತೆರಿಗೆ ನನ್ನ ಹಕ್ಕು” ಅಭಿಯಾನಕ್ಕೂ ಬೆಂಬಲ ಸೂಚಿಸಿದೆ.

Advertisement

ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಇದರಿಂದ ಪಕ್ಷಕ್ಕಾಗಿರುವ ಮುಜುಗರವನ್ನೂ ತಪ್ಪಿಸಬೇಕಾದ ಅನಿವಾರ್ಯಕ್ಕೆ ಕಾಂಗ್ರೆಸ್‌ ಸಿಲುಕಿದೆ. ಅಲ್ಲದೆ ಲೋಕ ಸಭೆ ಚುನಾವಣೆ ಸನ್ನಿಹಿತವಾಗುತ್ತಿರು ವುದರಿಂದ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಮುಂದಾಗಿದೆ. ಅದರಂತೆ ಬುಧವಾರ ದಿಲ್ಲಿಯಲ್ಲಿ ದೊಡ್ಡಮಟ್ಟದ ಪ್ರತಿ ಭಟನೆ ನಡೆಯಲಿದ್ದು, ಅದರಲ್ಲಿ ಭಾಗಿಯಾಗುವಂತೆ ಪಕ್ಷದ ಶಾಸಕರು, ವಿಧಾನಪರಿಷತ್ತಿನ ಸದಸ್ಯರೆಲ್ಲರಿಗೂ ಆಹ್ವಾನ ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಶಿವಕುಮಾರ್‌, ಮಂಗಳವಾರವೇ ಎಲ್ಲರೂ ದಿಲ್ಲಿಯಲ್ಲಿ ಹಾಜರಿರುವಂತೆ ತಾಕೀತು ಮಾಡಿದ್ದಾರೆ.

ಜಿಲ್ಲಾ ಉಸ್ತುವಾರಿಗಳೇ ಹೊಣೆ
ಆಯಾ ಜಿಲ್ಲಾ ವ್ಯಾಪ್ತಿಯ ಶಾಸಕರು ಮತ್ತು ಮೇಲ್ಮನೆ ಸದಸ್ಯರನ್ನು ದಿಲ್ಲಿಗೆ ಕರೆತರುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದು, ಯಾರೂ ತಪ್ಪಿ ಹೋಗದಂತೆ ನೋಡಿ ಕೊಳ್ಳುವ ಹೊಣೆ ವಹಿಸಿದೆ.

ಪಕ್ಷದಲ್ಲಿ ಎಲ್ಲರನ್ನೂ ಹಿಡಿದಿಟ್ಟು ಕೊಳ್ಳುವ ಸಲುವಾಗಿಯೂ ಕರ್ನಾಟಕ ದಿಂದ ದಿಲ್ಲಿಗೆ ಶಾಸಕರು, ಮೇಲ್ಮನೆ ಸದಸ್ಯರನ್ನು ಕರೆದೊಯ್ಯುವ ಕಸರತ್ತನ್ನು ಕಾಂಗ್ರೆಸ್‌ ನಡೆಸಿದೆ.

4 ವರ್ಷಗಳಲ್ಲಿ 45 ಸಾವಿರ ಕೋ.ರೂ. ಅನ್ಯಾಯ: ಸಿಎಂ
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ ವಾಗು ತ್ತಿದೆ ಎಂದು ಆರೋ ಪಿ ಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “15ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ ಬರುವ ತೆರಿಗೆಯ ಪಾಲು ಗಣನೀಯವಾಗಿ ಇಳಿಕೆಯಾಗಿದೆ. ಇದರಿಂದ ಕಳೆದ 4 ವರ್ಷಗಳಲ್ಲಿ ರಾಜ್ಯಕ್ಕೆ ಬರೋಬ್ಬರಿ 45 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ಅನ್ಯಾಯವನ್ನು ಸಹಿಸಲಾಗದು” ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಅನ್ಯಾಯವನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ, “ನನ್ನ ತೆರಿಗೆ, ನನ್ನ ಹಕ್ಕು’ ಟ್ವಿಟರ್‌ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದಿದ್ದಾರೆ.

Advertisement

ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆ ಋಣ ದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾದರಿ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮ ದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾದರಿ ಎಂದಿದ್ದಾರೆ. ಕುಳಿತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಬೇಕು. ನ್ಯಾಯಕ್ಕಾಗಿ ಧ್ವನಿ ಎತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next