Advertisement

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಭರದ ಸಿದ್ಧತೆ

02:18 AM Feb 15, 2019 | |

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್‌, ಚುನಾವಣೆಗೆ ಪ್ರಚಾರ ತಂತ್ರ ಕುರಿತಂತೆ ಎಚ್‌.ಕೆ. ಪಾಟೀಲ್‌ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಲಾಯಿತು.

Advertisement

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಪ್ರಚಾರ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಚಾರ ಸಮಿತಿಯಲ್ಲಿ ವಿವಿಧ ತಂಡಗಳ ರಚನೆ ಮಾಡುವುದು. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಪ್ರಚಾರ ಕಾರ್ಯಕ್ರಮಗಳ ರೂಪು ರೇಷೆ ಸಿದ್ಧಪಡಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next