Advertisement

Loksabha; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಬಾಯಲ್ಲೂ ಸತ್ಯವೇ ಬಂದಿದೆ: ಬಿ.ವೈ. ವಿಜಯೇಂದ್ರ

12:53 PM Feb 04, 2024 | keerthan |

ವಿಜಯಪುರ: ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಗಳಾಗಬೇಕು ಎಂದು ಅವರ ಪರ ಅಲೆಯಿದೆ. ಇದನ್ನರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಾಯಲ್ಲೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳಲ್ಲಿ ಗೆಲ್ಲುತ್ತದೆ ಹಾಗೂ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ ಎಂಬ ಸತ್ಯವೇ ಹೊರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

Advertisement

ಭಾನುವಾರ ಮನಗೂಳಿ ಹಿರೇಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಬಂದಿಳಿದು ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ದೇಶದ ಜನತೆಗೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂಬ ಸತ್ಯದ ಅರಿವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸತ್ಯದ ಮನವರಿಕೆಯಾಗಿಯೇ ಅವರ ಬಾಯಲ್ಲೂ ಸತ್ಯವೇ ಹೊರ ಬಂದಿದೆ ಎಂದರು.

ನಾನು ಹಾಗೂ ಪ್ರೀತಂ ಗೌಡ ರಾಜಕೀಯ ಷಡ್ಯಂತ್ರಗಳಿಗೆ ಬಲಿಯಾದೆವು ಎಂದಿರುವ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಮೌನದ ಮೊರೆಹೋದ ವಿಜಯೇಂದ್ರ, ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಪಕ್ಷಕ್ಕೆ ಮರಳುವ ಕುರಿತು ಕೇಳಿದ ಪ್ರಶ್ನೆಗೆ ನೀವೇ ಉತ್ತರಿಸಬೇಕು ಎಂದು ನಗೆ ಬೀರಿದರು‌.

Advertisement

Udayavani is now on Telegram. Click here to join our channel and stay updated with the latest news.

Next