Advertisement

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

04:14 PM Sep 18, 2024 | Team Udayavani |

ಹೊಸದಿಲ್ಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’(One Nation, One Election) ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದು ಇದು ಅಸಂಭವ ಎಂದು ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ(ಸೆ18 ) ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

”ಏಕಕಾಲಕ್ಕೆ ಚುನಾವಣಾ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದು ಚುನಾವಣೆಗೆ ಮುನ್ನ ಮಾಡಿರುವ ಚುನಾವಣ ಗಿಮಿಕ್. ಚುನಾವಣೆಗಳು ಬಂದಾಗ ಬಿಜೆಪಿ ಈ ಎಲ್ಲ ವಿಷಯಗಳನ್ನು ಹೇಳುತ್ತಾರೆ. ಇದನ್ನು ದೇಶದ ಜನ ಒಪ್ಪುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್( Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತ ಸಂಪುಟ ಒಪ್ಪಿಗೆ ನೀಡಿದೆ.

ಆಂತರಿಕ ಒತ್ತಡ

Advertisement

‘ಅಪ್ರಾಯೋಗಿಕ’ ಎಂದು ಕರೆದಿರುವ ಖರ್ಗೆಯವರ ಹೇಳಿಕೆಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿದ್ದು ” ಪ್ರತಿಪಕ್ಷಗಳು ಆಂತರಿಕ ಒತ್ತಡವನ್ನು ಅನುಭವಿಸಲು ಪ್ರಾರಂಭಿಸಬಹುದು.ಆದರೆ ,ಸಲಹೆ ಪ್ರಕ್ರಿಯೆಯಲ್ಲಿ ಪ್ರತಿಕ್ರಿಯಿಸಿದ ಶೇಕಡಾ 80 ಕ್ಕಿಂತ ಹೆಚ್ಚು ಪ್ರತಿಸ್ಪಂದಕರು ತಮ್ಮ ಸಕಾರಾತ್ಮಕ ಬೆಂಬಲವನ್ನು ನೀಡಿದ್ದಾರೆ, ವಿಶೇಷವಾಗಿ ಯುವಕರು, ಇದರ ಪರವಾಗಿದ್ದಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.