Advertisement

ಕಾಂಗ್ರೆಸ್‌ ಅಧ್ಯಕ್ಷ ಪದ: ಗೆಹಲೋಟ್‌ ಆಗ್ರಹ ತಿರಸ್ಕರಿಸಿದ ರಾಹುಲ್‌ ಗಾಂಧಿ

09:28 AM Jul 02, 2019 | Sathish malya |

ಹೊಸದಿಲ್ಲಿ : ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್‌ ಅವರ ಆಗ್ರಹವನ್ನು ರಾಹುಲ್‌ ಗಾಂಧಿ ಬಲವಾಗಿ ತಿರಸ್ಕರಿಸಿದ್ದಾರೆ.

Advertisement

ನಾನು ಪಕ್ಷದ ಅಧ್ಯಕ್ಷನಾಗಿ ಮುಂದುವರಿಯದಿರಲು ಈಗಾಗಲೇ ದೃಢವಾಗಿ ತೀರ್ಮಾನಿಸಿರುವುದರಿಂದ ಆ ನಿರ್ಧಾರವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಈಗಿನ ರಾಜಕೀಯ ಸನ್ನಿವೇಶದಲ್ಲಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ರಾಹುಲ್‌ ಗಾಂಧಿ ಅವರಿಗೆ ಮಾತ್ರವೇ ಇದೆ ಎಂದು ಹೆಚ್ಚಿನೆಲ್ಲ ಕಾಂಗ್ರೆಸ್‌ ನಾಯಕರು ಅಭಿಪ್ರಾಯಪಡುತ್ತಾರೆ. ಆದುದರಿಂದ ಪಕ್ಷದ ಎಲ್ಲ ನಾಯಕರ ಆಶಯಕ್ಕೆ ಅನುಗುಣವಾಗಿ ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಗೆಹಲೋಟ್‌ ಇಂದು ಸೋಮವಾರ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ್ದರು.

ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಮುಖ್ಯಮಂತ್ರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುವುದಕ್ಕೆ ಪೂರ್ವಭಾವಿಯಾಗಿ ಗೆಹಲೋಟ್‌ ಮಂಡಿಸಿರುವ ಅಭಿಪ್ರಾಯವನ್ನು ರಾಹಲ್‌ ಗಾಂಧಿ ಸಾರಾಸಗಟು ತಿರಸ್ಕರಿಸಿರುವುದನ್ನು ನಿರಾಶಾದಾಯಕ ಬೆಳವಣಿಗೆ ಎಂದು ತಿಳಿಯಲಾಗಿದೆ. ಕಾಂಗ್ರೆಸ್‌ ಮುಖ್ಯಮಂತ್ರಿಗಳ ಸಭೆಯಲ್ಲಿ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ ವಿಷಯ ಕೂಡ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next