ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಸರಿಸುತ್ತಿರುವ ಜನ ವಿರೋಧಿ ಧೋರಣೆಗಳನ್ನುಖಂಡಿಸಿ, ಪೆಟ್ರೋಲ್-ಡೀಸೆಲ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮಾ.3 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ಜನಧ್ವನಿ ಜಾಥಾಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಬಿಜೆಪಿಸರ್ಕಾರ ಜನ ವಿರೋಧಿ ಧೋರಣೆ ಅನುಸರಿಸಿ ಬಡವರು ಮತ್ತು ಮಧ್ಯಮ ವರ್ಗದವರನ್ನುಸಂಕಷ್ಟದಲ್ಲಿ ಸಿಲುಕಿಸಿ ಉದ್ಯಮಿಗಳಿಗೆ ಅನುಕೂಲಮಾಡುವ ಯೋಜನೆಗಳನ್ನು ಜಾರಿಗೊಳಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಕೆಶಿ, ಸಿದ್ದು ಚಾಲನೆ: ಕೋವಿಡ್ ಸೋಂಕಿನ ನೆಪದಲ್ಲಿ ಜನರನ್ನು ಲೂಟಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಜನರ ಧ್ವನಿಯಾಗಿ ಕಾಂಗ್ರೆಸ್ ಪಕ್ಷ ಮಾ.03 ರಂದು ಬೆಂಗಳೂರು ಗ್ರಾಮಾಂತರ ಹಾಗೂಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನಧ್ವನಿ ಜಾಥಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.
ಭನ್ನಾಭಿಪ್ರಾಯ ಸುಳ್ಳು, ವದಂತಿ: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಉಳಿಸುವ ಸಲುವಾಗಿ ಸ್ಥಳೀಯ ನಾಯಕರು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇದೇ ವಿಚಾರವಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಭಿನ್ನಮತವಿದೆ ಇದೆಎನ್ನುವುದು ವದಂತಿ. ಇಬ್ಬರು ನಾಯಕರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು ಸ್ಪಷ್ಟಪಡಿಸಿದರು.
ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಮಾತನಾಡಿ, ಕೋವಿಡ್ ಸೋಂಕಿನ ನೆಪದಲ್ಲಿ ಜನರಿಗೆ ತೊಂದರೆ ನೀಡುವ ಕಾಯಕವನ್ನು ಬಿಜೆಪಿ ಸರ್ಕಾರ ರೂಢಿಸಿಕೊಂಡಿದೆ ಎಂದು ದೂರಿದರು. ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಪ್ರಧಾನಕಾರ್ಯದರ್ಶಿ ಸೂರಿ, ಎನ್‌ಎಸ್‌ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಕಿಸಾನ್‌ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾತವಾರ ಕೃಷ್ಣಪ್ಪ, ಒಬಿಸಿಘಟಕದ ಅಧ್ಯಕ್ಷ ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ, ಪಟ್ರೇನಹಳ್ಳಿ ಕೃಷ್ಣ ಇದ್ದರು.