ಗುಂಡ್ಲುಪೇಟೆ: ಮಡಹಳ್ಳಿ ಗುಡ್ಡ ಕುಸಿತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಸರ್ಕಾರ ಸೂಕ್ತ ಪರಿಹಾರಶೀಘ್ರ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಒತ್ತಾಯಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಗಣಿಗಾರಿಗೆ ಹೆಚ್ಚು ನಡೆಯುತ್ತಿದೆ ಎಂಬ ಆರೋಪವಿದ್ದು,ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ ಅಕ್ರಮ ಕ್ವಾರಿಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿದರು.
ಕಾಂಗ್ರೆಸ್‌ನಿಂದ ನೆರವು: ಕ್ವಾರೆ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ್ದು, ಜೀವನ ನಿರ್ವಹಣೆಗಾಗಿ ಬೇರೆಕಡೆಯಿಂದ ಕಾರ್ಮಿಕರು ಬಂದು ಕೆಲಸಮಾಡುತ್ತಿದ್ದರು. ಅವರಿಗೂ ಕುಟುಂಬವಿದ್ದು, ಸರ್ಕಾರ ಪರಿಹಾರ ನೀಡಬೇಕು. ಮೃತರಕುಟುಂಬಕ್ಕೆ ಕಾಂಗ್ರೆಸ್ ಪಕ್ಷದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.
ಶಾಸಕರಿಂದ ವಿನಾ ಕಾರಣ ಟೀಕೆ: ಶಾಸಕರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿನಾಕಾರಣಪಕ್ಷ ಹಾಗೂ ವೈಯಕ್ತಿಕವಾಗಿ ಟೀಕೆ ಮಾಡುತ್ತಿದ್ದಾರೆ. ಅಭಿವೃದ್ಧಿ ವಿಚಾರವಾಗಿ ತಾಲೂಕಿನಲ್ಲಿ ಕಳೆದ 4ವರ್ಷದಿಂದ ಏನೇನಾಗಿದೆ ಎಂಬುದನ್ನು ಜನರಿಗೆತಿಳಿಸುತ್ತಿದ್ದೇವೆ. ಬೇಕಿದ್ದರೆ ಚರ್ಚೆಗೆ ಬರಲಿ. ಅದನ್ನುಹೊರತು ಟೀಕೆ ಮಾಡುವ ಕ್ರಮ ಸರಿಯಲ್ಲ ಎಂದು ಗುಡುಗಿದರು.
ಜಿಪಂ ಮಾಜಿ ಉಪಾಧ್ಯಕ್ಷ ಕಬ್ಬಹಳ್ಳಿ ಮಹೇಶ್ ಮಾತನಾಡಿದರು. ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್,ಮೊಳಯ್ಯನಹುಂಡಿ ಬಸವರಾಜು, ಕರಕಲಮಾದಳ್ಳಿಪ್ರಭುಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್ ಇತರರು ಇದ್ದರು.