ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದ್ದು, ಎಲ್ಲರಿಗೂ ರಾಜಕೀಯವಾಗಿ ಸ್ವಾತಂತ್ರ್ಯವಿದೆ. ಉತ್ತರ ಕರ್ನಾಟಕ ಭಾಗಕ್ಕೆ ಎಲ್ಲಾದರೂ ಹೋಗಿ ಗೆದ್ದು ತೋರಿಸಲಿ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಸವಾಲು ಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಪಂ ಚುನಾವಣೆಗೆ ಮುನ್ನವೇ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಅವರೇ ವರ್ತೂರ್‌ಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ವೆಂದು ಸ್ಪಷ್ಟಪಡಿಸಿದ್ದರೂ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.
ಸಿದ್ದು, ಡಿಕೆಶಿ ಬರುವರು: ಮುಂಬರುವ ತಾಪಂ, ಜಿಪಂ ಚುನಾ ವಣೆಗೆ ಸಿದ್ಧರಾಗಲು ಬೂತ್ ಮಟ್ಟದಲ್ಲಿ ಸಮಿತಿಗಳ ರಚನೆಯಾಗಬೇಕಿದ್ದು, ಒಂದು ತಿಂಗಳೊಳಗಾಗಿ ಸಿದ್ದ ರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ಕರೆತಂದು ಜಿಲ್ಲೆ ಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್‌ನಲ್ಲಿ ಇರಲಿ: ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಮೂಲತಃ ಕಾಂಗ್ರೆಸ್ಸಿಗರು. ಆದರೆ ಯಾರದೋ ಮಾತು ಕೇಳಿ ಮಾಡುತ್ತಿದ್ದಾರೆ. ಜ್ಞಾನೋದಯ ಆಗಲಿ, ಇರುವುದಾದರೆ ಕಾಂಗ್ರೆಸ್‌ನಲ್ಲಿ ಇರಲಿ ಎಂದರು.
ಇಂದು ಪ್ರತಿಭಟನೆ: ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ.ಚಂದ್ರಾ ರೆಡ್ಡಿ ಮಾತನಾಡಿ, ಗ್ಯಾಸ್, ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೆಹಲಿ ರೈತರ ಹೋರಾಟ ಬೆಂಬಲಿಸಿ ಕೋಲಾರದಲ್ಲಿ ಬುಧವಾರ ಪ್ರತಿಭಟನೆ ಹಮ್ಮಿಕೊಂಡಿದ್ದು, ಕ್ಷೇತ್ರದ ಸುಮಾರು 5 ಸಾವಿರ ಮಂದಿಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನಗರದ ಗಾಂ ಧಿವನ ದಿಂದ ಪಾದಯಾತ್ರೆ ಆರಂಭಿಸಿ ತಾಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ. ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಪ್ರಸಾದ್‌ಬಾಬು, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್ ಉಪಸ್ಥಿತರಿದ್ದರು
ಎಲ್ಲರಿಗೂ ಗೊತ್ತಿರುವ ವಿಚಾರ :
ಶಾಸಕ ಕೆ.ಶ್ರೀನಿವಾಸಗೌಡರು ಕಾಂಗ್ರೆಸ್‌ಗೆ ಬರಲಿದ್ದಾರೆ ಎನ್ನುವ ಪ್ರಶ್ನೆಗೆ ಆ ಬಗ್ಗೆ ನನ್ನ ಗಮನಕ್ಕೆ ವಿಚಾರ ಬಂದಿಲ್ಲ. ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಸಂಬಂಧ ನನ್ನೊಂದಿಗೆ ಹೇಗಿದೆ ಎನ್ನುವುದು ಪ್ರಪಂಚಕ್ಕೆ ಗೊತ್ತಿರುವ ವಿಚಾರ ಎಂದು ಪ್ರತಿಕ್ರಿಯಿಸಿದರು.