ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಅಶ್ಲೀಲ ಪದಗಳನ್ನು ಬಳಕೆ ಮಾಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿದರು.
ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಪ್ರತಿಭಟನಾಮೆರವಣಿಗೆಯಲ್ಲಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಯುವತಿಗೆ ಸರ್ಕಾರಿ ಕೆಲಸಕೊಡಿಸುವುದಾಗಿ ಪುಸಲಾಯಿಸಿ ಲೈಂಗಿಕವಾಗಿಬಳಸಿಕೊಂಡಿರುವುದು ಖಂಡನೀಯ. ಈಗರಮೇಶ ಜಾರಕಿಹೊಳಿ ತಮ್ಮ ತಪ್ಪು ಮುಚ್ಚಿಕೊಳ್ಳಲುಡಿ.ಕೆ.ಶಿವಕುಮಾರ್ ಅವರ ಮೇಲೆ ಆಪಾದನೆಮಾಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಎರಡು ದಿನಗಳೊಳಗಾಗಿ ರಮೇಶ ಜಾರಕಿಹೊಳಿಯನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತೇವೆ. ಇಡೀ ರಾಜ್ಯ ಹೊತ್ತಿ ಉರಿಯಲಿದೆ ಎಂದು ಎಚ್ಚರಿಸಿದರು. ಲೈಂಗಿಕಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ರಾಜ್ಯ ಸರ್ಕಾರದ ಕೈಗೊಂಬೆಯಾಗಿರುವುದರಿಂದ ಅವರನ್ನು ಬಂಧಿಸಲು ಆಗುತ್ತಿಲ್ಲ. ಪ್ರಭಾವಕ್ಕೆ ಮಣಿದಿರುವುದು ಸ್ಪಷ್ಟವಾಗಿದೆ. ನೊಂದ ಯುವತಿ ಕುಟುಂಬ ದವರನ್ನು ತಮ್ಮ ವಶದಲ್ಲಿಟ್ಟುಕೊಂಡು ತನಿಖಾ ತಂಡದ ಮುಂದೆ ಹಾಜರುಪಡಿಸಿ ತಮ್ಮಪರ ವಕಾಲತ್ತು ವಹಿಸುವಂತೆ ಮಾಡಿದ್ದಾರೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ಆರೋಪಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಎಂ.ಡಿ. ಹಸನ್ ತಾಹೀರ್, ಉಪಾಧ್ಯಕ್ಷ ವಸೀಂ ಅಕ್ರಂ, ಶಶಾಂಕ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಿರಣ್ ಯಾದವ್, ಸುಹೀಲ್(ಗುಡ್ಡು) ನಗರಾಧ್ಯಕ್ಷ ಮಹಮ್ಮದ್ ಆಜಾಂ, ಜಿಲ್ಲಾಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಜಿಲ್ಲಾಧ್ಯಕ್ಷಮುದಸಿರ್ ನವಾಜ್, ಕೆಪಿಸಿಸಿ ಸದಸ್ಯ ಗಂಜಿಗಟ್ಟೆ ಮಧುಗೌಡ, ಎಸ್. ಸುದೀಪ್, ರಂಗಸ್ವಾಮಿ, ಹರೀಶ್, ರವಿ, ರಂಗಸ್ವಾಮಿ ಮತ್ತಿತರರು ಭಾಗವಹಿಸಿದ್ದರು.