Advertisement
ಈಶ್ವರಪ್ಪ ರಾಜೀನಾಮೆಗಾಗಿ ಕಾಂಗ್ರೆಸ್ ಸರಕಾರಕ್ಕೆ ಗುರುವಾರ ಬೆಳಗ್ಗೆ 11 ಗಂಟೆಯ ಗಡುವು ನೀಡಿತ್ತು ಅದು ಈಡೇರದ ಕಾರಣ ಕಲಾಪ ಆರಂಭವಾಗು ತ್ತಿದ್ದಂತೆಯೇ ಸದನದಲ್ಲಿ ಪ್ರತಿಭಟನೆ ಮುಂದುವರಿ ಸಿತು. ವಿಧಾನಸಭೆಯಲ್ಲಿ ಪ್ರತಿಭಟನೆ ನಡುವೆಯೇ ಸ್ಪೀಕರ್ ಕಾಗೇರಿ ಅವರು ಪ್ರಶ್ನೋತ್ತರ ಕಲಾಪ ಹಾಗೂ ಸ್ಟಾಂಪ್ ಡ್ನೂಟಿ ಮಸೂದೆ ಮಂಡನೆಗೆ ಅವಕಾಶ ಮಾಡಿ ದರು. ಅನಂತರ ವಿಪಕ್ಷ ಸದಸ್ಯರಿಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆಗೆ ಅವಕಾಶ ನೀಡಿದರೂ ಕಾಂಗ್ರೆಸ್ ಸದಸ್ಯರು ಧರಣಿ ಬಿಟ್ಟು ಹಿಂದೆ ಸರಿಯದೇ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಆಗ್ರಹಿಸಿದರು.
Related Articles
Advertisement
ಈಶ್ವರಪ್ಪ ಅವರನ್ನು ವಜಾ ಮಾಡುವವರೆಗೂ ಹೋರಾಟ ಮಾಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಸದಸ್ಯರು ಎರಡೂ ಸದನಗಳಲ್ಲಿ ಅಹೋರಾತ್ರಿಧರಣಿಗೆ ನಿರ್ಧರಿಸಿದರು. ಸ್ಪೀಕರ್ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರೂ ಕಾಂಗ್ರೆಸ್ ನಾಯಕರು ಸದನದಿಂದ ಹೊರ ಬರಲಿಲ್ಲ.
ಪರಿಷತ್ತಿನಲ್ಲಿಯೂ ಧರಣಿ:
ಪರಿಷತ್ತಿನಲ್ಲಿಯೂ ಈಶ್ವರಪ್ಪ ವಿರುದ್ಧ ಮಂಡಿಸಿದ್ದ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಅಲ್ಲಿಯೂ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಧರಣಿ ನಿರತ ಕಾಂಗ್ರೆಸ್ ಸದಸ್ಯರನ್ನು ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ಮಾಡಿದರು. ಅವರಿಗೆ ರಾತ್ರಿ ಮಲಗಲು ಹಾಗೂ ಊಟದ ವ್ಯವಸ್ಥೆ ಮಾಡಿರುವ ಬಗ್ಗೆ ಪರಿಶೀಲಿಸಿದರು.
ಸಿಎಂ, ಬಿಎಸ್‌ವೈ ಯತ್ನ:
ಧರಣಿ ಕೈ ಬಿಟ್ಟು ಕಲಾಪ ನಡೆಯಲು ಸಹಕರಿಸುವಂತೆ ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪ ಜತೆಗೂಡಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸದಸ್ಯರ ಮನವೊಲಿಕೆ ಪ್ರಯತ್ನ ನಡೆಸಿದರು. ಅದಕ್ಕೆ ಸ್ಪಂದಿಸದ ಕಾಂಗ್ರೆಸ್ ನಾಯಕರು ಧರಣಿ ಮುಂದುವರಿಸಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನ
ದಲ್ಲಿಯೇ ಕುಳಿತಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಅವರಿಗೆ ಆಹಾರ ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಂಜೆ 8 ಗಂಟೆ ಹೊತ್ತಿಗೆ ಸ್ಪೀಕರ್ ಜತೆ ಸಿಎಂ ಮತ್ತೂಂದು ಬಾರಿ ವಿಧಾನಸಭೆಗೆ ಆಗಮಿಸಿ ಕಾಂಗ್ರೆಸ್ ನಾಯಕರ ಮನ ವೊಲಿಸಲು ಪ್ರಯತ್ನಿಸಿದರು. ತಾವು ಧರಣಿ ಆರಂಭಿಸಿದ್ದು, ಇದರಿಂದ ಹಿಂದೆ ಸರಿಯುವುದಿಲ್ಲ ಕಾಂಗ್ರೆಸ್ ಹೇಳಿದ್ದರಿಂದ ಸಿಎಂ ಮರಳಿದರು.
ಜನಪರ ವಿಚಾರ, ರೈತ ವಿಚಾರ, ರಾಜ್ಯದ ಹಿತದೃಷ್ಟಿಯಿಂದ ಧರಣಿಗಳು ಆಗಿರುವುದು ನೋಡಿದ್ದೇನೆ. ಸಚಿವರ ಒಂದು ಹೇಳಿಕೆಯನ್ನು ಮುಂದಿಟ್ಟು ಕೊಂಡು ಧರಣಿ ಮಾಡುತ್ತಿದ್ದಾರೆ. ಈಶ್ವರಪ್ಪ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳ ಲಾಗಿದೆ. ಅವರ ಮಾತಿನಲ್ಲಿ ತಪ್ಪೂ ಇಲ್ಲ, ಕಾನೂನು ವಿರೋಧಿ ಅಂಶವೂ ಇಲ್ಲ. –ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಈಶ್ವರಪ್ಪ ಮಾತನಾಡಿರುವುದಕ್ಕೆ ಸಾಕ್ಷಿ ಇದೆ. ಶಾಸಕನಿಂದ ಹಿಡಿದು ರಾಷ್ಟ್ರಪತಿ ವರೆಗೆ ಚುನಾಯಿತ ಪ್ರತಿನಿಧಿಗಳು ಸಂವಿ ಧಾನವನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರಮಾಣ ಸ್ವೀಕರಿಸಿದ್ದೇವೆ. ಸಚಿವರೇ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದರೆ ಹೇಗೆ. ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ.- ಸಿದ್ದರಾಮಯ್ಯ, ವಿಪಕ್ಷ ನಾಯಕ
ಈಶ್ವರಪ್ಪ ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸಲು ಬಯಸಿದ್ದು, ಇದು ದೇಶದ ಕಾನೂನಿಗೆ ವಿರುದ್ಧವಾಗಿದೆ. ಅವರು ಸಂವಿಧಾನ ಹಾಗೂ ರಾಷ್ಟ್ರಧ್ವಜವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ಮಾಡುತ್ತಿದ್ದೇವೆ. –ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ