Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

04:09 PM Feb 28, 2021 | Team Udayavani |

ಬಳ್ಳಾರಿ: ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಮಜ್ದೂರ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಆಟೋ ಚಾಲಕರು ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ನಗರದ ಮೋತಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಪೆಟ್ರೋಲ್‌ ರಹಿತ ಆಟೋವನ್ನು ಹಗ್ಗಕಟ್ಟಿ ಎಳೆದು ತರುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಬೆಲೆ ದಿನೇದಿನೆ ಏರಿಕೆಯಾಗುತ್ತಿದೆ. ಪ್ರತಿದಿನ ಪೈಸೆಗಳಲ್ಲಿ ಏರಿಕೆಯಾಗುವ ಪೆಟ್ರೋಲ್‌ ಬೆಲೆ ಇಂದು 97 ರೂ., ಡಿಸೇಲ್‌ ಬೆಲೆ 86 ರೂ.ಗಳಿಗೆ ಬಂದು ನಿಂತಿದೆ. ಅಡುಗೆ ಅನಿಲ ಬೆಲೆಯನ್ನು ತಿಂಗಳಲ್ಲಿ ನಾಲ್ಕು ಬಾರಿ 100 ರೂ. ಏರಿಕೆ ಮಾಡಿ ಸಾರಿಗೆ ವೆಚ್ಚ ಸೇರಿ 810 ರೂ.ಗಳಿಗೆ ಏರಿಕೆಯಾಗಿದೆ. ಈ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಮಧ್ಯ ತರಗತಿ, ಬಡ ಕುಟುಂಬಗಳು, ಕೂಲಿ ಕೆಲಸ ಮಾಡುವವರಿಗೆ ಸಮಸ್ಯೆಯಾಗಲಿದೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್‌.ಮಹ್ಮದ್‌ ರμàಕ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾತೈಲ ಬೆಲೆ ಜಾಸ್ತಿ ಇದ್ದರೂ, ಪೆಟ್ರೋಲ್‌ ಬೆಲೆ 70 ರೂ. ದಾಟಿರಲಿಲ್ಲ. ಆದರೆ, ಅಂತಾರಾಷ್ಟ್ರೀಯ  ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಿದೆ. ಆದರೂ, ಕೇಂದ್ರ ಸರ್ಕಾರ ಇಂಧನ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ದೇಶದ ಬಡಜನರನ್ನು ಅಭಿವೃದ್ಧಿ ಪಡಿಸುವುದಾಗಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ದಿನೇ ದಿನೇ ತೈಲ ಬೆಲೆ ಹೆಚ್ಚಳವಾಗುತ್ತಿದ್ದರೂ ಮೌನವಹಿಸಿ ಬಡವರ ವಿರೋಧಿಯಾಗಿದ್ದಾರೆ. ಇಂತಹ ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಬೆಲೆಯನ್ನುನಿಯಂತ್ರಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಐಎನ್‌ಟಿಯುಸಿ ಮುಖಂಡರಾದ ಕೆ.ತಾಯಪ್ಪ, ಜೆ.ಕೆ.ನಾಯ್ಡು, ವಿಲ್ಸನ್‌, ಕಲ್ಲುಕಂಬ ಪಂಪಾಪತಿ, ಎಲ್‌. ಮಾರೆಣ್ಣ, ರಾಂಪ್ರಸಾದ್‌, ಅರುಣ್‌ ಕುಮಾರ್‌, ಪಾಲಿಕೆ ಸದಸ್ಯೆ ಪರ್ವಿನ್‌ ಬಾನು ಸೇರಿ ಹಲವಾರು ಜನರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next