Advertisement

Governor ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದ ಕೈ ಆಕ್ರೋಶ

12:58 AM Aug 19, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ರವಿವಾರ ಕಾಂಗ್ರೆಸ್‌ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

Advertisement

ಮೈಸೂರಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ನೇತೃತ್ವದಲ್ಲಿ ನೂರಾರು ಜನರು ಮೈಸೂರು-ನಂಜನಗೂಡು ರಸ್ತೆಯ ಎಪಿಎಂಸಿ ರಿಂಗ್‌ರೋಡ್‌ ಜಂಕ್ಷನ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಾಜ್ಯಪಾಲರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಮೈಸೂರು ನಗರದ ಕಾಂಗ್ರೆಸ್‌ ಭವನದ ಮುಂಭಾಗ ರವಿವಾರ ಪ್ರತಿಭಟನೆ ನಡೆಸಿದರು. ಪಿರಿಯಾಪಟ್ಟಣದಲ್ಲಿಯೂ ಕಾಂಗ್ರೆಸ್‌ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹೆಚ್ಚಿ ರಸ್ತೆ ತಡೆದು, ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next