Advertisement

ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

03:29 PM Jun 27, 2022 | Team Udayavani |

ಸಾಗರ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕಚೇರಿಗೆ ನುಗ್ಗುವ ಪ್ರಯತ್ನ ನಡೆಸಿದ ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ನಗರ ಠಾಣೆ ಪೊಲೀಸರು ಬಂಧಿಸಿ, ಠಾಣೆಯಲ್ಲಿ ಸ್ವಲ್ಪಹೊತ್ತು ಇರಿಸಿಕೊಂಡು ನಂತರ ಬಿಡುಗಡೆ ಮಾಡಿದರು.

Advertisement

ಈ ಮೊದಲು ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈ ಯೋಜನೆ ಯುವಕರ ಭವಿಷ್ಯವನ್ನು ನಾಶ ಮಾಡಲು ಕೇಂದ್ರ ನಡೆಸಿದ ಹುನ್ನಾರವಾಗಿದೆ. 17 ವರ್ಷ ದಾಟಿದ ಅಪ್ರಾಪ್ತರಿಗೆ ಸೇನೆಯಲ್ಲಿ ಹುದ್ದೆ ಕೊಡುತ್ತೇವೆ ಎನ್ನುವುದೇ ಅವೈಜ್ಞಾನಿಕವಾಗಿದೆ. ಅಗ್ನಿಪಥ್ ಹೆಸರೇ ವಿಚಿತ್ರವಾಗಿದ್ದು, ಯುವಕರನ್ನು ಬೆಂಕಿಗೆ ತಳ್ಳುತ್ತೇವೆ ಎನ್ನುವ ಸಂದೇಶವನ್ನು ಕೇಂದ್ರ ಪ್ರತಿಪಾದಿಸಲು ಮುಂದಾಗಿದೆ. ಇಂತಹ ಯುವಜನ ವಿರೋಧಿ ಯೋಜನೆಯನ್ನು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಖಂಡಿಸುವ ಅಗತ್ಯವಿದೆ. ಯೋಜನೆಯನ್ನು ಹಿಂದಕ್ಕೆ ಪಡೆಯುವಂತೆ ಸಹಸ್ರಾರು ಜನರು ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವ ಅಗತ್ಯವಿದೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವದ ಕತ್ತುಹಿಸುಕುವ ಕೆಲಸ ಮಾಡುತ್ತಿದ್ದು, ರಾಷ್ಟ್ರಾದ್ಯಂತ ಅವರು ಅಧಿಕಾರದಿಂದ ಕೆಳಗೆ ಇಳಿದರೆ ಸಾಕು ಎಂದು ಪ್ರಾರ್ಥಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಮೋದಿ ಮತ್ತು ಕೇಂದ್ರ ಸರ್ಕಾರ ಯುವಜನರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಯುವಕರು ಸಿಡಿದೇಳದೆ ಹೋದಲ್ಲಿ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಹಿಂದಕ್ಕೆ ಪಡೆಯುವುದಿಲ್ಲ. ನಾಲ್ಕು ವರ್ಷ ಸೈನ್ಯದಲ್ಲಿ ಉದ್ಯೋಗ ನೀಡಿ ನಂತರ ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವ ಯೋಜನೆಯೇ ಅವೈಜ್ಞಾನಿಕವಾದದ್ದು. ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರ ಇದೆಯೇ ವಿನಾ ಬಡವರ ಪರವಾಗಿ ಇಲ್ಲ ಎನ್ನುವುದು ಪದೇಪದೇ ಸಾಬೀತಾಗುತ್ತಿದೆ. ಅಗ್ನಿಪಥ್ ಯೋಜನೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ದೇಶವ್ಯಾಪಿ ಕಾಂಗ್ರೆಸ್ ಇನ್ನಷ್ಟು ಉಗ್ರವಾದ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್

Advertisement

ಸಭೆಯನ್ನು ಉದ್ದೇಶಿಸಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ಎನ್‌ಎಸ್‌ಯುಐ ಅಧ್ಯಕ್ಷ ಮನೋಜ್ ಕುಗ್ವೆ ಇನ್ನಿತರರು ಮಾತನಾಡಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಧಮಾಲತಿ, ಸುಮಂಗಲ, ಪ್ರಮುಖರಾದ ರಫೀಕ್ ಬಾಬಾಜಾನ್, ಮಹಾಬಲ ಕೌತಿ, ರವಿಕುಮಾರ್ ಎಚ್.ಎಂ., ಕೆ.ಸಿದ್ದಪ್ಪ, ಎಲ್.ಚಂದ್ರಪ್ಪ, ಅನ್ವರ್ ಭಾಷಾ, ಆನಂದ್ ಭೀಮನೇರಿ, ಸಂತೋಷ್, ಕಿರಣ್ ದೊಡ್ಮನೆ, ತುಕಾರಾಮ್ ಸಿರವಾಳ ಇನ್ನಿತರರು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next