Advertisement

ಡಿಕೆಶಿ ವಿರುದ್ಧ ಅವಹೇಳನ ಪೋಸ್ಟ್‌ : ಕಾಂಗ್ರೆಸ್‌ ಆಕ್ರೋಶ

04:21 PM Sep 18, 2022 | Team Udayavani |

ದೊಡ್ಡಬಳ್ಳಾಪುರ: ಕಾಂಗ್ರೆಸ್‌ ಅಧ್ಯಕ್ಷ ಡಿ. ಕೆ.ಶಿವಕುಮಾರ್‌ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Advertisement

ನಗರದ ನಿವಾಸಿಯಾದ ಬಿಜೆಪಿ ಕಾರ್ಯಕರ್ತ ಎನ್ನಲಾದ ರಘುನಂದನ್‌ ಎಂಬಾತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭಾವಚಿತ್ರವನ್ನು ಅವಹೇಳನಾಕಾರಿ ಯಾಗಿ ಎಡಿಟ್‌ ಮಾಡಿ, ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ನಂತರ ಡಿಲೀಟ್‌ ಮಾಡಿದ್ದಾರೆ. ಈ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ ಮಾತ ನಾಡಿ, ಡಿ.ಕೆ.ಶಿವಕುಮಾರ್‌ ಬಗ್ಗೆ ಅವಹೇಳ ನಾಕಾರಿಯಾಗಿ ಪೋಸ್ಟ್‌ ಮಾಡಿರುವ ರಘುನಂದನ್‌ ಬಂಧಿ ಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿಳಿಸಿ, ವಿಧಾನಸಭಾ ಅ ಧಿವೇ ಶನದಲ್ಲಿ ಸದನದ ಗಮನಕ್ಕೆ ತರಲಾಗುವುದು ಎಂದರು.

ಇತ್ತೀಚೆಗೆ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವುದು, ಕಾರಿನ ಮೇಲೆ ಮೊಟ್ಟೆ ಎಸೆಯುವುದು ಮೊದಲಾದ ಕೃತ್ಯಗಳು ನಡೆಯು ತ್ತಿವೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ತಲೆ ತಗ್ಗಿಸುವಂತೆ ಮಾಡಿವೆ. ಯಾವುದೇ ಪಕ್ಷದ ಮುಖಂಡ ರಾಗಲಿ ಇಂತಹುದಕ್ಕೆ ಪ್ರಚೋದನೆ ನೀಡದೇ ತಮ್ಮ ಕಾರ್ಯಕರ್ತರಿಗೆ ತಿಳಿ ಹೇಳಬೇಕು ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ತಾಲೂಕು ಘಟಕದ ಅಧ್ಯಕ್ಷ ಬೈರೇಗೌಡ, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್‌ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಮುಂಚೂಣಿ ಘಟಕಗಳ ಅಧ್ಯಕ್ಷರು, ನಗರಸಭೆಯ ಸದಸ್ಯರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next