Advertisement

40% ಕಮಿಷನ್ ವಿರುದ್ಧ ‘ಪೇ ಸಿಎಂ’ಅಭಿಯಾನ ಆರಂಭಿಸಿದ ಕಾಂಗ್ರೆಸ್‌

01:23 PM Sep 21, 2022 | Team Udayavani |

ಬೆಂಗಳೂರು : ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದೆ.

Advertisement

ರಾಜಧಾನಿ ಬೆಂಗಳೂರಿನ ಆಯಕಟ್ಟಿ‌ನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಲಾಗಿದೆ. ಜತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಅಭಿಯಾನ ತೀವ್ರಗೊಳಿಸಲಾಗಿದೆ.

ಕ್ಯೂ ಆರ್ ಕೋಡ್ ಇರುವ ಪೇಟಿಎಂ ಮಾದರಿ ಸ್ಟಿಕರ್ ನ್ನು ಪೇಸಿಎಂ ಎಂದು ಬದಲಾಯಿಸಿ ಇಲ್ಲಿ 40% ಕಮಿಷನ್ ಸ್ವೀಕರಿಸಲಾಗುವುದು ಎಂದು ವ್ಯಂಗ್ಯವಾಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಡೆಸುತ್ತಿರುವ ಈ ಅಭಿಯಾನ ಸಿಎಂ ಬೊಮ್ಮಾಯಿ ಅವರನ್ನು ಕೆರಳಿಸಿದ್ದು, ಗುಪ್ತದಳದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಚಾಮರಾಜನಗರ: ಸಾಲ ತೀರಿಸಲಾಗದೇ ಮಗನನ್ನೇ ಮಾರಿದ ತಂದೆ

Advertisement

 

Advertisement

Udayavani is now on Telegram. Click here to join our channel and stay updated with the latest news.

Next