Advertisement
ಹೊಸದಿಲ್ಲಿ: ಈಶಾನ್ಯ ದಿಲ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯ ಕುಮಾರ್ ವಿರುದ್ಧ ಕಾಂಗ್ರೆಸ್ ಪದಾಧಿಕಾರಿಗಳೇ ರವಿವಾರ ಪ್ರತಿಭಟನೆ ನಡೆಸಿದ್ದಾರೆ. ಹೊಸದಿಲ್ಲಿಯಲ್ಲಿ ಹೊಸದಾಗಿ ತೆರೆಯಲಾಗಿರುವ ಕನ್ಹಯ್ಯ ಕುಮಾರ್ ಕಚೇರಿ ಎದುರು ಪಕ್ಷದ ಕೆಲವು ಸದಸ್ಯರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲವ್ಲಿ ಕೂಡ ಹೊರಗಿನ ವ್ಯಕ್ತಿಗಳಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದರು ಎಂದು ಪ್ರತಿಭಟನೆ ನಡೆಸುತ್ತಿದ್ದವರು ವಾದಿಸಿದ್ದಾರೆ.