Advertisement

ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾ ಗೊಳಿಸುವಂತೆ ಅಗ್ರಹಿಸಿ ಪ್ರತಿಭಟನೆ

04:24 PM Feb 21, 2022 | Team Udayavani |

ಕೊರಟಗೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಷ್ಟ್ರಧ್ವಜ ಕ್ಕೆ ಅಪಮಾನ ಮಾಡಿದ್ದಾರೆ. ಅದ್ದರಿಂದ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬೀಡಬೇಕು ಎಂದು ಒತ್ತಾಯಿಸಿ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಅರಕೆರೆ ಶಂಕರ್ ಮತ್ತು ಕೋಡ್ಲಹಳ್ಳಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರ್ ನಾಹೀದ ಜಮ್ ಜಮ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

Advertisement

ಪಟ್ಟಣದ ಎಸ್ ಎಸ್ ಆರ್ ವೃತ್ತದಿಂದ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಸಾಗಿ ತಾಲ್ಲೂಕು ಆಡಳಿತ ಭವನದ ಮುಂಭಾಗ ಜಮಾವಣೆಗೊಂಡು ಕೆ.ಎಸ್.ಈಶ್ವರಪ್ಪ ವಿರುದ್ದ ದಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಅಶ್ವಥ್ ನಾರಾಯಣ್ ಮಾತನಾಡಿ ಡಾ.ಜಿ.ಪರಮೇಶ್ವರ ರವರ ನಿರ್ದೇಶನದಂತೆ ನಾವು ಈ ದಿನ ಬಿಜೆಪಿ ಸರ್ಕಾರದ ಸಚಿವ ಈಶ್ವರಪ್ಪರ ವಿರುದ್ದ ರಾಷ್ಟ್ರಧ್ವಜದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದು ,ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಧ್ವಜ ಹಾರಿಸುತ್ತೇವೆ . ಅದ್ದರಿಂದ ಈ ದಿನ ನಾವು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಪಕ್ಷದ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ, ಸದಸ್ಯರಿಗೆ ಧನ್ಯವಾದ ವನ್ನು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ : ವಿಷ ತ್ಯಾಜ್ಯ ಹರಿಸುವ ಕಾರ್ಖಾನೆಗಳಿಗೆ ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ

ಪಪಂ ಸದಸ್ಯ ಕೆ.ಆರ್ ಒಬಳರಾಜು ಮಾತನಾಡಿ ಕರ್ನಾಟಕದ ರಾಜ್ಯದ ಒಂದು ಉತ್ತಮವಾದಂತಹ ಸಚಿವ ಸ್ಥಾನದಲ್ಲಿರುವ ಕೆ.ಎಸ್.ಈಶ್ವರಪ್ಪ ರವರು ಈ ದೇಶದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಹಿನ್ನಲೆಯಲ್ಲಿ ಅದನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ನಾವು ಮಾಡುತ್ತಿದ್ದೇವೆ. ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಹಾಗೂ ಧರ್ಮಗಳನ್ನು ಒಡೆದು ನಡುವೆ ಭಿನ್ನಭಿಪ್ರಾಯ ಉಂಟು ಮಾಡಿ ಶಾಂತಿ ಕದಡುವ ಪ್ರಯತ್ನ ಬಿಜೆಪಿಯವರ ಅಜೆಂಡಾವಾಗಿದೆ ಎಂದರು.

Advertisement

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹೆಚ್. ಎಮ್. ರುದ್ರಪ್ರಸಾದ್,ಯುವ ಅಧ್ಯಕ್ಷ ವಿನಯ್ ಕುಮಾರ್,ತಾಪಂ ಮಾಜಿ ಉಪಾಧ್ಯಕ್ಷ ವೆಂಕಟಪ್ಪ, ಗ್ರಾಪಂ ಅದ್ಯಕ್ಷ ವಸಂತರಾಜು,ರವಿಕುಮಾರ್, ಕಾರ್ ಮಹೇಶ್, ಶಾಸಕರ ಅಪ್ತ ಕಾರ್ಯ ದರ್ಶಿ ಅರವಿಂದ್, ಮೈಲಾರಪ್ಪ, ಮಹಿಳಾ ಘಟಕದ ಅದ್ಯಕ್ಷೆ ಜಯಮ್ಮ ,ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next