Advertisement

ರಾಯಚೂರು: ತೈಲ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಹೋರಾಟ

12:18 PM Jun 11, 2021 | Team Udayavani |

ರಾಯಚೂರು: ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಹಾಗೂ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ನಿಂದ ನಗರದ ವಿವಿಧ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ಕಾಂಗ್ರೆಸ್ ನಿಂದ ದೇಶ ವ್ಯಾಪಿ ನೀಡಿದ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಹೋರಾಟ ಕೈಗೊಳ್ಳಲಾಗಿದೆ. ನಗರದ ಗಂಜ್ ಸರ್ಕಲ್ ಹಾಗೂ ಗಾಂಧಿ ವೃತ್ತ ಸಮೀಪದ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಕೈಗೆಟುಕದಂತಾಗಿದೆ. ಬಡಜನರಿಗೆ ಆರ್ಥಿಕ ಹೊರೆಯಾಗಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಬೆಲೆ ಇಳಿಕೆ ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದರು. ಪಕ್ಷದ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next