ಮಾಲೂರು: ಭೂಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು, ಕೋವಿಡ್ ನಿಯಂತ್ರಣಕ್ಕೆ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿದರು.
ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ, ಕಾರ್ಯ ಕರ್ತರು ತಹಶೀಲ್ದಾರ್ ಮಂಜುನಾಥ್‌ಗೆ ಮನವಿ ಸಲ್ಲಿಸಿದರು. ಪಟ್ಟಣದ ಮಾರುತಿ ಬಡಾವಣೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಮಾಯಿಸಿದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ತಾಲೂಕು ಕಚೇರಿಗೆ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆಡಳಿತ ನಡೆಸುತ್ತಿರುವ ಜನಪ್ರತಿನಿಧಿಗಳು ಸರಕಾರದ ಹಣವನ್ನು ಕೋವಿಡ್ ನೆಪದಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸಿ.ಲಕ್ಷ್ಮೀ ನಾರಾಯಣ್, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಚನ್ನರಾ ಯಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೇಹಳ್ಳಿ ನಾರಾಯಣಸ್ವಾಮಿ, ತಾಲೂಕು ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ನಾರಾಯಣಸ್ವಾಮಿ, ಮುಖಂಡರಾದ ಅಂಜನಿ ಸೋಮಣ್ಣ, ಎಂ.ಎನ್.ಗುಂಡಪ್ಪ, ಅಶ್ವತ್ಥ ರೆಡ್ಡಿ, ವಿಜಯನರಸಿಂಹ, ಮಧು ಸೂದನ್, ಮುರಳೀ ಧರ್, ಹನುಮಂತರೆಡ್ಡಿ, ಬ್ಯಾಲಹಳ್ಳಿ ರಮೇಶ್, ಎಂ.ವಿ.ಪಿ. ಮಂಜು, ಮಂಜುನಾಥ್, ಶಬೀರ್ ಇನ್ನಿತರರು ಇದ್ದರು.