ಕುಷ್ಟಗಿ : ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕುಷ್ಟಗಿಯ ಕಾರ್ಗಿಲ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದವರೆಗೂ ಸಂಚರಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಶಾಸಕ, ಕೆಪಿಸಿ.ಸಿ.ಪ್ರಧಾನ ಕಾರ್ಯದರ್ಶಿ ಹಸನಸಾಬ್ ದೋಟಿಹಾಳ ಮಾತನಾಡಿ, ದೆಹಲಿಯ ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಈಶ್ವರಪ್ಪ ಹೇಳಿಕೆ ಹೀನ ಮನಸ್ಥಿತಿ ಅಗಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಈಶ್ವರಪ್ಪ ಅವರನ್ನು ವಜಾಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆ.ಎಸ್. ಈಶ್ವರಪ್ಪ ಅವರಿಗೆ ನೈತಿಕತೆ ಒಂಚೂರು ಇದ್ದಲ್ಲಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ಮಾತನಾಡಿ ಕೆ.ಎಸ್. ಈಶ್ವರಪ್ಪ ಅವರು ಆಡಿದ ಮಾತಿನಿಂದ ಅವರನ್ನು ವಜಾ ಮಾಡಿ ದೇಶದ್ರೋಹ ಪ್ರಕರಣ ಅಡಿಯಲ್ಲಿ ಪ್ರಕರಣ ದಾಖಲಿಸುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಿಲ್ಲದು ಎಂದರು.
ಇದನ್ನೂ ಓದಿ : ನೀರಿನ ಗಲಾಟೆ ತಡೆಯಲು ಹೋದ ಎಎಸ್ಐ ಗೆ ಇಟ್ಟಿಗೆಯಿಂದ ಹೊಡೆದು ಹಲ್ಲೆ!
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅದ್ಯಕ್ಷೆ ಮಾಲತಿ ನಾಯಕ್,ಕಾಂಗ್ರೆಸ್ ಯುವ ಮುಖಂಡ ದೊಡ್ಡಬಸವ ಬಯ್ಯಾಪೂರ, ಪುರಸಭೆ ಸದಸ್ಯ ಸಯ್ಯದ್ ಖಾಜಾ ಮೈನುದ್ದಿನ ಮುಲ್ಲಾ, ಕಾಂಗ್ರೆಸ್ ಯುವ ಘಟಕ ಕುಷ್ಟಗಿ ಬ್ಲಾಕ್ ಅಧ್ಯಕ್ಷ ಶಿವರಾಜ್ ಕಟ್ಟಿಮನಿ, ತಾವರಗೇರಾ ಬ್ಲಾಕ್ ಅಧ್ಯಕ್ಷ ಮಹಾಂತೇಶ ಬಂಡೇರ, ಪರಶುರಾಮನಾಗರಾಳ,ಮಂಜುನಾಥ ಕಟ್ಟಿಮನಿ, ಯಮನೂರು ಕೋರಿ, ಉಮೇಶ ಮಂಗಳೂರು ಮತ್ತೀತರಿದ್ದರು. ನಂತರ ಗ್ರೇಡ್-2 ತಹಶೀಲ್ದಾರ ಮುರಳೀಧರ ಮೊಕ್ತೆದಾರ ಅವರಿಗೆ ಮನವಿ ಸಲ್ಲಿಸಿದರು.