ಚಿಕ್ಕೋಡಿ: ಪೆಟ್ರೋಲ್,ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಅತಿಯಾಗಿ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪಟ್ಟಣದಲ್ಲಿ ಎರಡು ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರತಿಗಳಿಗೆ ಮನವಿ ಸಲ್ಲಿಸಿದರು.
ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ,ಅಹಿಂದ ಮುಖಂಡ ಮಹಾವೀರ ಮೋಹಿತೆ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರುಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರುಬಸವ ಸರ್ಕಲ್ ಬಳಿ ಮಾನವ ಸರಪಳಿನಿರ್ಮಿಸಿದರು. ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿ ಮತ್ತು ನಿಪ್ಪಾಣಿ-ಮುಧೋಳ ರಾಜ್ಯಹೆದ್ದಾರಿ ಒಂದು ಗಂಟೆಗೂ ಹೆಚ್ಚು ಕಾಲ ತಡೆದುಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ, ಒಂದು ಕಡೆ ರೈತರು ಕರಾಳಕಾನೂನುಗಳ ವಿರುದ್ಧ ಹೋರಾಟ ಮಾಡುತ್ತಿದ್ದರೆಇನ್ನೊಂದೆಡೆ ಕೇಂದ್ರ ಸರ್ಕಾರವು ಪೆಟ್ರೋಲ್,ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆಯನ್ನು ಅತಿಯಾಗಿ ಏರಿಕೆ ಮಾಡಿ ಜನಸಮಾನ್ಯರಿಗೆಅನ್ಯಾಯ ಮಾಡುತ್ತಿದೆ. ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಪೆಟ್ರೋಲ್ ಮೇಲಿನಸುಂಕವನ್ನು ಪ್ರತಿ ಲೀಟರ್‌ಗೆ 9.20 ರಿಂದ 32.98 ರೂ.ಗೆ ಏರಿಸಿದೆ. ಏರಿಕೆಯ ಪ್ರಮಾಣ ಶೇ.258ರಷ್ಟಾಗಿದೆ. ಇದೇ ರೀತಿ ಡೀಸೆಲ್ ಬೆಲೆಯಲ್ಲೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೇ ರೀತಿ ತೈಲ ಬೆಲೆ ಏರಿಕೆ ಮಾಡುತ್ತಾ ಹೋದರೆ ಬರುವ ದಿನಮಾನಗಳಲ್ಲಿ ಸರ್ಕಾರದ ವಿರುದ್ಧ ಜನಸಾಮಾನ್ಯರು ರಸ್ತೆಗಿಳಿಯುವ ಕಾಲ ದೂರಇಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಬೆಲೆಏರಿಕೆಯಿಂದ ಬಡಜನರು ಸಂಕಷ್ಟ ಪಡುತ್ತಿದ್ದಾರೆ.ಪ್ರಧಾನಿ ಮೋದಿ ಅವರು ತೈಲಬೆಲೆ ಇಳಿಕೆಮಾಡಿ ಜನಸಾಮಾನ್ಯರಿಗೆ ಅನುಕೂಲಕಲ್ಪಿಸಬೇಕು. ಇಲ್ಲದೇ ಹೋದರೆ ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಜೊತೆ ರಸ್ತೆಗಿಳಿದು ಸರ್ಕಾರಕ್ಕೆತಕ್ಕ ಪಾಠ ಕಲಿಸಲಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಅಹಿಂದ ಮುಖಂಡಮಹಾವೀರ ಮೋಹಿತೆ, ಪುರಸಭೆ ಸದಸ್ಯರಾದರಾಮಾ ಮಾನೆ, ಸಾಬೀರ ಜಮಾದಾರ, ಜಿಲ್ಲಾಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ನಸಲಾಪೂರೆ, ಈರಗೌಡ ಪಾಟೀಲ, ಅನಿಲಪಾಟೀಲ, ಸತೀಶ ಕುಲಕರ್ಣಿ, ಮಹೇಂದ್ರತಮ್ಮಣ್ಣವರ, ಗಜಾನನ ಮಂಗಸೂಳಿ, ಶಂಕರಗೌಡ ಪಾಟೀಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.