Advertisement
ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಶಪ್ಪನವರ ಬೆಂಬಲಿಗರನ್ನು ಪೊಲೀಸರು, ತಡೆದರು. ಈ ವೇಳೆ ಪೊಲೀಸರು ಮತ್ತು ಕಾಶಪ್ಪನವರ ಬೆಂಬಲಿಗರ ಮಧ್ಯೆ ವಾಗ್ವಾದವೂ ನಡೆಯಿತು.
ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ, ಕಳೆದ 2019ರ ಲೋಕಸಭೆ ಚುನಾವಣೆಯ ಅಭ್ಯರ್ಥಿಯೂ ಆಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿವೆ. ವೀಣಾ ಬದಲು, ವಿಜಯಪುರ ಜಿಲ್ಲೆಯ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ ಅವರಿಗೆ ಟಿಕೆಟ್ ಅಂತಿಮವಾಗಿದೆ ಎನ್ನಲಾಗಿದೆ. ಹೀಗಾಗಿ ತೀವ್ರ ಆಕ್ರೋಶಗೊಂಡಿರುವ ವೀಣಾ ಬೆಂಬಲಿಗರು, ಗೋ ಬ್ಯಾಕ್ ಸಂಯುಕ್ತಾ ಎಂಬ ಫಲಕ ಹಿಡಿದು ಪ್ರತಿಭಟನೆ ನಡೆಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದರೂ, 4.97 ಲಕ್ಷ ಮತ ಪಡೆದಿದ್ದರು. ಸೋತರೂ ಐದು ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರ ಪಕ್ಷ ಸಂಘಟನೆ, ಸಾಮಾಜಿಕ ಸೇವೆಯಲ್ಲಿ ತೊಡಗಿದ್ದಾರೆ. ಇಡೀ ಕ್ಷೇತ್ರದ ಜನರು ಅವರಿಗೆ ಟಿಕೆಟ್ ಕೊಡಬೇಕೆಂಬ ಒತ್ತಾಯ ಇದೆ. ಆದರೂ, ಟಿಕೆಟ್ ತಪ್ಪುತ್ತದೆ ಎಂದು ಸುದ್ದಿ ಹಬ್ಬಿದೆ. ಅವರಿಗೆ ಟಿಕೆಟ್ ತಪ್ಪಿದರೆ ನಾವು ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
Related Articles
Advertisement