Advertisement

ಕೆ.ಎಸ್.ಈಶ್ವರಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

02:50 PM Feb 21, 2022 | Team Udayavani |

ಪಿರಿಯಾಪಟ್ಟಣ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಆದ್ದರಿಂದ ಅವರನ್ನು  ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಮಾಜಿ ಶಾಸಕ ಕೆ ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೆ.ಚಂದ್ರಮೌಳಿ ಯವರಿಗೆ ಮನವಿ ಪತ್ರ ಸಲ್ಲಿಸಿದರು.

Advertisement

ಪಟ್ಟಣದ ಕಾಂಗ್ರೆಸ್‌ ಪಕ್ಷದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಬಿ.ಎಂ.ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಸಾಗಿ ತಾಲ್ಲೂಕು ಆಡಳಿತ ಭವನ ಮುಂಭಾಗ  ಜಮಾವಣೆಗೊಂಡು ಕೆ.ಎಸ್‌.ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ  ದೇಶದ ಜನತೆ ರಾಷ್ಟ್ರಧ್ವಜವನ್ನು ತಾಯಿಗೆ ಸಮಾನವಾಗಿ ಗೌರವಿಸುತ್ತಿದ್ದಾರೆ ಹೀಗಿರುವಾಗ ಹರುಕು ಬಾಯಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳುವ ಮೂಲಕ ರಾಷ್ಟ್ರ ಧ್ವಜದ ಬಗ್ಗೆ ಲಘುವಾಗಿ ಮಾತನಾಡಿರುವುದು ಅತ್ಯಂತ ಅಪಾಯಕಾರಿ ಹಾಗೂ ದೇಶದ್ರೋಹದ ಕೆಲಸವಾಗಿದೆ, ತ್ರಿವರ್ಣ ಧ್ವಜವು ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆಯ ಸಂಕೇತವಾಗಿದೆ ಹೀಗಿರುವಾಗ ಈಶ್ವರಪ್ಪ ಅವರ ಹೇಳಿಕೆ ಭಾರತೀಯರಿಗೆ ನೋವುಂಟು ಮಾಡಿದೆ ರಾಷ್ಟ್ರ ಧ್ವಜ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು  ಎಂದರು.

ತಾಪಂ ಮಾಜಿ ಅಧ್ಯಕ್ಷ ಐಲಾಪುರ ರಾಮು ಮಾತನಾಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಾದ್ಯಂತ ಮನುವಾದಿಗಳು ಹಾಗೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳು  ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಸಂವಿಧಾನವನ್ನು ಅಭದ್ರಗೊಳಿಸುವ ಕೆಲಸ ಮಾಡುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಕಟ್ಟಿ ಕುಳಿತಿರುವುದನ್ನು ನೋಡಿದರೆ ಇವರಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂಬ ಅನುಮಾನಗಳು ಮೂಡುತ್ತಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ ಮಾತನಾಡಿ  ರಾಷ್ಟ್ರಧ್ವಜ ಹಾಗೂ ಸಂವಿಧಾನದ ರಕ್ಷಣೆ ಮಾಡಬೇಕಾದ್ದು ಆಳುವ ಸರ್ಕಾರಗಳ ಜವಾಬ್ದಾರಿ ಆದರೆ  ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದರೂ ಅದನ್ನು ಸಮರ್ಥಿಸಿಕೊಳ್ಳುವ ಮೂಲಕ ದೇಶದ ಜನತೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ದೂರಿದ್ದರು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್ ಚಂದ್ರಮೌಳಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ತಾಲ್ಲೂಕು ಎಸ್ಸಿ ಘಟಕದ ಅಧ್ಯಕ್ಷ ಪಿ.ಮಹದೇವ್, ಟೌನ್ ಘಟಕದ ಅಧ್ಯಕ್ಷ ಎ.ಕೆ.ಗೌಡ, ಮುಖಂಡರಾದ ನಿತಿನ್ ವೆಂಕಟೇಶ್, ಎನ್.ಎಸ್.ಭುಜಂಗ,  ಅನಿಲ್ ಕುಮಾರ್,  ಬಿ.ಜೆ.ಬಸವರಾಜು, ಸ್ಟೂಡಿಯೋ ಆನಂದ್, ಸಿ.ತಮ್ಮಣಯ್ಯ, ಮಂಜುನಾಥ್, ಸತ್ಯಗಾಲ ಕುಮಾರಸ್ವಾಮಿ, ಪುಟ್ಟರಾಜು,   ಪಿ.ಎಸ್.ಉಪೇಂದ್ರ, ಜೆ.ಮೋಹನ್,  ಪಿ.ಪಿ.ಪುಟ್ಟಯ್ಯ, ಭೀಮಣ್ಣ, ಮಾಲಂಗಿ ಹರೀಶ್, ಸೀಗೂರು ವಿಜಯಕುಮಾರ್, ಬಿರ್ಲಾ ಹರೀಶ್, ಸುಂಡವಾಳು ಶಫೀ ಅಹಮದ್, ಭೂತನಹಳ್ಳಿ ಶಿವಣ್ಣ, ಸುಳಗೋಡು ಶಿವರಾಜ್, ಮಹಮದ್ ಇರ್ಷಾದ್, ಶೇಖರ್, ಮಹೇಂದ್ರ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next