Advertisement

ಕೇಂದ್ರ ಹಾಗು ರಾಜ್ಯ ಸರಕಾರದ ವೈಫಲ್ಯತೆ ಖಂಡಿಸಿ ಕಾಪು ಶಾಸಕರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

03:26 PM Jun 22, 2021 | Team Udayavani |

ಕಾಪು: ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸುವಲ್ಲಿ  ವಿಫಲತೆ ಕಂಡಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಲಸಿಕೆ ಒದಗಿಸುವುದರಲ್ಲಿಯೂ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

Advertisement

ಮಂಗಳವಾರ ಕಾಪು ಶಾಸಕರ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಸಮಾನ ಮನಸ್ಕ ಪಕ್ಷಗಳು ಮತ್ತು ಸಂಘಟನೆಗಳು ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಸಹಬಾಳ್ವೆ ಸಂಘಟನೆ ವತಿಯಿಂದ ನಡೆದ ಜನಾಗ್ರಹ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಲಸಿಕಾ ಕೇಂದ್ರದಲ್ಲಿಯೂ ರಾಜಕೀಯ ಮೇಳೈಸುತ್ತಿದ್ದು ತಾರತಮ್ಯತೆ ಧೋರಣೆಯನ್ನು ಅನುಸರಿಸಲಾಗುತ್ತಿದೆ. ಎಲ್ಲಾ ವಯೋ ವರ್ಗದವರಿಗೂ ಲಸಿಕೆ ನೀಡುವುದಾಗಿ ಭರವಸೆ ನೀಡಿರುವ ಸರಕಾರ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಬೇಕಾದ ಮೊದಲ ಡೋಸನ್ನೇ ಇನ್ನೂ ಕೂಡ ನೀಡುವಲ್ಲಿ ಅಸಮರ್ಥವಾಗಿದೆ ಎಂದು ಆರೋಪಿಸಿದರು.

ಲಾಕ್ ಡೌನ್ ನಿಂದ ಸಂತ್ರಸ್ತರಾದ ಕಾರ್ಮಿಕ, ಶ್ರಮಿಕ ವರ್ಗದವರಿಗೆ ರಾಜ್ಯ ಸರಕಾರ ಘೋಷಿಸಿರುವ ಪ್ಯಾಕೇಜ್ ಪಡೆಯಲು ವಿಧಿಸಲಾಗಿರುವ ಕಠಿಣ ಷರತ್ತುಗಳು ಮತ್ತು ನಿಯಮಗಳಿಂದಾಗಿ ಅರ್ಹರ ಕೈಸೇರದೆ ಘೋಷಿತ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನ ಕಾಯಿಯಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಖಾಲಿ ಚೀಲವನ್ನು ಸುಟ್ಟು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಉಪ ತಹಶೀಲ್ದಾರ್ ಕೆ. ರವಿ ಶಂಕರ್,  ಅಶೋಕ್ ಬಳೆಗಾರ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ. ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ,  ಅನ್ವರ್ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ‌. ಶೆಟ್ಟಿ ಮೊದಲಾದವರು ಮಾತನಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಪ್ರಮುಖರಾದ ಜಿತೇಂದ್ರ ಪುಟಾರ್ಡೊ,  ವಿನಯ ಬಲ್ಲಾಲ್, ಶರ್ಫುದ್ದೀನ್ ಕಾಪು, ಹರೀಶ್ ಶೆಟ್ಟಿ ಪಾಂಗಾಳ, ನವೀನ್ ಎನ್ ಶೆಟ್ಟಿ, ದೀಪಕ್ ಕುಮಾರ್ ಎರ್ಮಾಳ್, ಗಣೇಶ್ ಕೋಟ್ಯಾನ್, ಕೇಶವ ಸಾಲ್ಯಾನ್ ಹೆಹಮಾಡಿ, ಝಹೀರ್ ಅಹಮದ್ ಬೆಳಪು, ನಾಗೇಶ್ ಕುಮಾರ್ ಉದ್ಯಾವರ, ಜೆಡಿಎಸ್ ಮುಖಂಡರಾದ ಇಸ್ಮಾಯಿಲ್ ಪಲಿಮಾರ್, ಇಸ್ಮಾಯಿಲ್ ಕನ್ನಂಗಾರ್, ಶಭೀ ಅಹಮದ್ ಖಾಜಿ ಮೊದಲಾದವರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next