Advertisement

ರಾಷ್ಟ್ರ ಧ್ವಜ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ : ವಿವಾದಕ್ಕೆ ಕಾರಣ

05:15 PM Feb 16, 2022 | Team Udayavani |

ಬೆಂಗಳೂರು :ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ರಾಷ್ಟ್ರ ಧ್ವಜ ಪ್ರದರ್ಶಿಸಿ ಪ್ರತಿಭಟನೆ ನಡೆಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

Advertisement

ಸದನದ ನಿಯಮಾವಳಿಗಳನ್ನು ಉಲ್ಲಂಘಿಸಿ ಕಾಂಗ್ತೆಸ್ ಶಾಸಕರು ರಾಷ್ಟ್ರ ಧ್ವಜವನ್ನು ಭಿತ್ತಿಪತ್ರದ ರೂಪದಲ್ಲಿ ಬಳಕೆ ಮಾಡಿರುವುದು ಈಗ ತೀವ್ರ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಸ್ಪೀಕರ್ ಕಾಗೇರಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ  ಆಕ್ಷೇಪ ವ್ಯಕ್ತಪಡಿಸಿದ್ದು ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಕಾಂಗ್ರೆಸಿಗರು ಧ್ವಜವನ್ನು ಹೋರಾಟಕ್ಜೆ ಬಳಸಿಕೊಂಡ ಬಗ್ಗೆ ಸಚಿವ ಸುನೀಲ್ ಕುಮಾರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲೂ ಈ ಬಗ್ಗೆ ಕಿಡಿಕಾರಿದೆ.

ಏನಿದು ಗಲಾಟೆ ? 

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ನಡೆಸಿದ ಕಾಂಗ್ರೆಸ್ ಪ್ರತಿಭಟನೆ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಇದರ ಮುಂದುವರಿದ ಭಾಗವಾಗಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಈ ಅಚಾತುರ್ಯ ಎಸಗಿದೆ.

Advertisement

ಸಿಎಲ್ ಪಿಯಲ್ಲೇ ವಿರೋಧ
ರಾಷ್ಟ್ರ ಧ್ವಜವನ್ನು ಸದನಕ್ಕೆ ಕೊಂಡೊಯ್ಯುವುದು ಬೇಡ ಎಂದು‌ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೇ ಅಭಿಪ್ರಾಯ ವ್ಯಕ್ತವಾಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ‌ ಹಿರಿಯ ನಾಯಕರ ಅಭಿಪ್ರಾಯವನ್ನು ಲೆಕ್ಕಿಸದೇ ಕಾಂಗ್ರೆಸ್ ಶಾಸಕರು ನಡೆಸಿದ ಪ್ರತಿಭಟನೆ ಈಗ ತಿರುಗು ಬಾಣವಾಗಿದೆ.

ಅಹೋರಾತ್ರಿ ಧರಣಿಗೆ ಮುಂದಾದ ಕಾಂಗ್ರೆಸ್ 

ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next