Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆ

02:10 PM Apr 10, 2022 | Team Udayavani |

ಚಾಮರಾಜನಗರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಹೊರಟ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ರಚಿಸಿ, ಕೆಲ ಕಾಲ ರಸ್ತೆ ತಡೆ ನಡೆಸಿದರು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನವಿರೋಧಿಯಾಗಿದ್ದು, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ ಬೆಲೆ ಏರಿಕೆಯಲ್ಲಿಯೇ ಮಗ್ನವಾಗಿದೆ. ಪ್ರಮುಖವಾಗಿ ಡೀಸೆಲ್‌, ಪೆಟ್ರೋಲ್‌, ಅಡುಗೆ ಅನಿಲ ದರಗಳನ್ನು ಯದ್ವಾತದ್ವಾ ಏರಿಕೆ ಮಾಡುತ್ತಿದೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ ಎಂದರು.

ಸರ್ಕಾರಕ್ಕೆ ಹಿಡಿಶಾಪ: ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರು ಬಿಜೆಪಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಅಲ್ಲದೇ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಇದನ್ನರಿತ ಬಿಜೆಪಿ ನಾಯಕರು ಅಭಿವೃದ್ಧಿ ವಿಚಾರದಲ್ಲಿ ಹಿನ್ನೆಡೆ ಅನುಭವಿಸಿ, ಈಗ ಜನರನ್ನು ಧಾರ್ಮಿಕ ಭಾವನೆಗಳ ಮೂಲಕ ಕೋಮು ಗಲಭೆ ಸೃಷ್ಟಿಸಲು ಮುಂದಾಗಿದೆ. ಈ ಪರಿಸ್ಥಿತಿಯಲ್ಲಿ ಹಿಂದು ಮುಸ್ಲಿಮರ ನಡುವೆ ಗಲಭೆ ಸೃಷ್ಟಿಸಲು ಯತ್ನಿಸುತ್ತಿದೆ. ದೇಶ ಹಾಗೂ ರಾಜ್ಯದಲ್ಲಿ ಕೋಮು ಗಲಭೆಯನ್ನು ಸೃಷ್ಟಿಸಲು ಮುಂದಾಗಿದೆ. ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡಿ, ಮತ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಹುನ್ನಾರ ಇದಾಗಿದ್ದು, ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ಸಾಮಾನ್ಯರ ಮೇಲಿರುವ ಬೆಲೆ ಏರಿಕೆಯನ್ನು ಕಡಿಮೆ ಮಾಡಿ, ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕೇಂದು ಮರಿಸ್ವಾಮಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್‌, ರಾಜ್ಯ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸ ನಾಯಕ, ಜಿ.ಪಂ. ಮಾಜಿ ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಸಿ.ಎ. ಮಹದೇವಶೆಟ್ಟಿ, ಬ್ಲಾಕ್‌ ಅಧ್ಯಕ್ಷರಾದ ಮಹಮದ್‌ ಅಸYರ್‌, ಎಸ್ಸಿ ಘಟಕದ ಅಧ್ಯಕ್ಷ ಕೆ. ನಾಗರಾಜು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷೆ ಲತಾ ರಾಜಶೇಖರ್‌ ಜತ್ತಿ, ನಗರಸಭಾ ಸದಸ್ಯೆ ಚಿನ್ನಮ್ಮ, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಶಕುಂತಲಾ, ಯುವ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಅಜೀಜ್‌, ಪ್ರಧಾನ ಕಾರ್ಯದರ್ಶಿ ಕೆಲ್ಲಂಬಳ್ಳಿ ಸೋಮಶೇಖರ್‌, ನಾಗೇಂದ್ರ, ಮುಖಂಡರಾದ ಅಲೂರುಪ್ರದೀಪ್‌, ನಾಗವಳ್ಳಿ ನಾಗಯ್ಯ, ಸೋಫಿಯಾ, ಸುಹೇಲ್‌ ಆಲಿ ಖಾನ್‌, ಅಯೂಬ್‌ ಖಾನ್‌, ಸೈಯದ್‌ ತೌಸಿಫ್, ಕರಿನಂಜನಪುರ ಸ್ವಾಮಿ, ಎನ್‌ಎಸ್‌ ಯುಐ ಘಟಕದ ಅಧ್ಯಕ್ಷ ಮೋಹನ್‌, ಕಾಂಗ್ರೆಸ್‌ ಸೇವಾದಳದ ಅಧ್ಯಕ್ಷ ರವಿಗೌಡ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next