Advertisement

ವಿಧಾನಸೌಧಕ್ಕೆ ಶಿಫ್ಟ್ ಆದ ಕಾಂಗ್ರೆಸ್ ಪ್ರತಿಭಟನೆ

02:04 PM Apr 14, 2022 | Team Udayavani |

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ಈಗ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರು ವಿಧಾನಸೌಧದ ಎದುರು ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ಸಂತೋಷ್ ಪಾಟೀಲ್ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂ. ಪರಿಹಾರ ಕೊಡಬೇಕು: ಸಿದ್ದರಾಮಯ್ಯ

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next