Advertisement

Congress Protest: ಟೋಲ್‌ ಸ್ಥಾಪನೆಗೆ ಅವಕಾಶ ಕೊಡೆವು: ವಿನಯ್‌ ಕುಮಾರ್‌ ಸೊರಕೆ

12:16 AM Aug 22, 2024 | Team Udayavani |

ಪಡುಬಿದ್ರಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್‌ಗೇಟ್‌ ಸ್ಥಾಪನೆ ಪ್ರಕ್ರಿಯೆ ಕೈಬಿ ಡುವಂತೆ ಆಗ್ರಹಿಸಿ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ನೇತೃತ್ವ ದಲ್ಲಿ ಬುಧವಾರ ಕಂಚಿನಡ್ಕದಲ್ಲಿ ಪ್ರತಿಭಟನೆ ನಡೆಯಿತು.

Advertisement

ಸುರತ್ಕಲ್‌, ಹೆಜಮಾಡಿ, ಸಾಸ್ತಾನ ಬಳಿಕ ಈಗ ಕಂಚಿನಡ್ಕದಲ್ಲೂ ಟೋಲ್‌ ಸಂಗ್ರಹಿಸುವ ಹುನ್ನಾರ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯ ಹೆದ್ದಾರಿ ಯಲ್ಲಿ ಟೋಲ್‌ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎಂದು ವಿನಯಕುಮಾರ ಸೊರಕೆ ಹೇಳಿದರು.

ಈ ಟೋಲ್‌ಗೇಟ್‌ ವಿಷಯ ದಲ್ಲಿ ಕಾಂಗ್ರೆಸ್‌ ಹಾಗೂ ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸಿ, ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಕಾಂಗ್ರೆಸ್‌ ಮೇಲಿನ ಆರೋಪದ ವಿರು ದ್ಧ ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರತಿಭಟನೆ. ಇಲ್ಲಿನ ಸಮಸ್ಯೆಗೆ ಪಕ್ಷದ ವತಿಯಿಂದಲೇ ನ್ಯಾಯ ದೊರಕಿಸಿ ಕೊಡಲು ಈ ಹೋರಾಟ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಮಾತನಾಡಿ, ಟೋಲ್‌ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಕಾಂಗ್ರೆಸ್‌ ಮುಖಂಡ ಮುನಿ ಯಾಲು ಉದಯ್‌ ಕುಮಾರ್‌ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಡಾ| ದೇವಿ ಪ್ರಸಾದ್‌ ಶೆಟ್ಟಿ ಬೆಳಪು, ಶೇಖರ್‌ ಹೆಜಮಾಡಿ ಮಾತನಾಡಿದರು.

Advertisement

ಕೆಪಿಸಿಸಿ ಸಂಯೋಜಕ ನವೀನಚಂದ್ರ ಜೆ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಮುಖಂಡರಾದ ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಕಾಪು ದಿವಾಕರ ಶೆಟ್ಟಿ, ಅಲ್ಪಸಂಖ್ಯಾಕರ ಘಟಕದ ಜಿಲ್ಲಾಧ್ಯಕ್ಷ ಶರ್ಪುದ್ದೀನ್‌ ಶೇಖ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ದೀಪಕ್‌ ಕೋಟ್ಯಾನ್‌, ಉಡುಪಿ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ರಮೇಶ್‌ ಕಾಂಚನ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next