Advertisement

ಕಾಪು: ರೈತ ವಿರೋಧಿ, ಬೀಡಿ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

01:26 PM Feb 02, 2021 | Team Udayavani |

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿ, ಕೃಷಿ, ರೈತ, ಬೀಡಿ ಕಾರ್ಮಿಕರ ಸಹಿತವಾದ ವಿವಿಧ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ನೇತೃತ್ವದಲ್ಲಿ ಕಾಪು ಪೇಟೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು.‌

Advertisement

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ ಬೆನ್ನೆಲುಬಾದ ರೈತರಿಗೆ, ಕಾರ್ಮಿಕರಿಗೆ ಕಂಟಕ ಪ್ರಾಯವಾದ ನೂತನ ಕಾಯ್ದೆಗಳನ್ನು ಜಾರಿಗೆ ತಂದು ರೈತರ, ಕಾರ್ಮಿಕರ ಬದುಕನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ದುಸ್ತರಗೊಳಿಸಿವೆ ಎಂದರು.

ಬಡಪಾಯಿ ಬೀಡಿ ಕಾರ್ಮಿಕರ ಜೀವನಕ್ಕೆ ಮಾರಕವಾಗಲಿರುವ ಕಾಯ್ದೆಯನ್ನು ತರುವ ಮೂಲಕ ಬೀಡಿ ಕಾರ್ಮಿಕರ ಬದುಕಿಗೆ ಕೊಡಲಿಯೇಟು ನೀಡಲು ಹೊರಟಿರುವ ಸರಕಾರಗಳ ವಿರುದ್ದದ ಹೋರಾಟಕ್ಕೆ ಸಾರ್ವಜನಿಕರೂ ಕೈ ಜೋಡಿಸುವ ಅಗತ್ಯತೆ ಇದೆ ಎಂದರು.

ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಬಳಿಯಿಂದ ಕಾಪು ಪೇಟೆಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಬಳಿಕ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು. ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಯಿತು.

Advertisement

ಸಿಐಟಿಯು ರಾಜ್ಯ ಪ್ರತಿನಿಧಿ ಕವಿರಾಜ್, ಸಿಐಟಿಯು ಜಿಲ್ಲಾಧ್ಯಕ್ಷ ಮಹಾಬಲ ವಡೇರ ಹೋಬಳಿ, ಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣ ರೈ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಶಿವಾಜಿ ಸುವರ್ಣ, ಪುರಸಭೆ ಉಪಾಧ್ಯಕ್ಷೆ ಮಾಲಿನಿ, ಹರೀಶ್ ಶೆಟ್ಟಿ ಪಾಂಗಾಳ, ಜಿ.ಪಂ.‌ ಮಾಜಿ ಅಧ್ಯಕ್ಷೆ ಸರಸು ಡಿ.‌ ಬಂಗೇರ, ಕಾಂಗ್ರೆಸ್ ಮುಖಂಡರಾದ ನವೀನ್‌ ಎನ್. ಶೆಟ್ಟಿ, ವೈ. ಸುಕುಮಾರ್, ಸುಧೀರ್ ಕುಮಾರ್,  ರಮೀಜ್ ಹುಸೈನ್, ಅಮೀರ್‌ ಮಹಮ್ಮದ್, ಪ್ರಭಾ ಬಿ. ಶೆಟ್ಟಿ, ದೀಪಕ್ ಕುಮಾರ್ ಎರ್ಮಾಳ್, ಸೌರಭ್ ಬಲ್ಲಾಳ್, ಕೀರ್ತಿ ಶೆಟ್ಟಿ, ಹರೀಶ್ ನಾಯಕ್, ಅಖಿಲೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next