Advertisement

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

11:35 PM Sep 01, 2019 | Lakshmi GovindaRaj |

ಬೆಂಗಳೂರು: ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ ಅವರ ವಿರುದ್ಧ ರಾಜಕೀಯ ಪ್ರೇರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದ ಕೆಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಜರಾತ್‌ ಕಾಂಗ್ರೆಸ್‌ ಶಾಸಕರಿಗೆ ಡಿ.ಕೆ.ಶಿವಕುಮಾರ್‌ ರಕ್ಷಣೆ ನೀಡಿದ್ದರು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹಾಕಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ವಿನಾಕಾರಣ ವಿಚಾರಣೆ ನಡೆಸುತ್ತಿದ್ದಾರೆ ಎಂದು ದೂರಿದರು.

Advertisement

ಯಾದಗಿರಿಯಲ್ಲಿ ಸುಭಾಷ ವೃತ್ತದಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಅಬ್ದುಲ್‌ ರಜಾಕ್‌ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಐಟಿ ಮತ್ತು ಇಡಿ ಅಸ್ತ್ರವನ್ನು ಬಳಸಿ, ಡಿ.ಕೆ.ಶಿವಕುಮಾರ ಅವರನ್ನು ಮಾನಸಿಕವಾಗಿ ಕುಗ್ಗಿಸುವ ತಂತ್ರಗಾರಿಕೆ ನಡೆಸುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಬೆಂಗಳೂರು, ಕನಕಪುರ, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next