Advertisement

ಐಟಿ ದಾಳಿ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

11:54 AM May 05, 2018 | |

ಕಲಬುರಗಿ: ಕಲಬುರಗಿ ದಕ್ಷಿಣ ಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನೀಲಕಂಠರಾವ್‌ ಮೂಲಗೆ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರ ಆತ್ಮಸ್ಥೈರ್ಯ ಕುಗ್ಗಿಸಲು ರಾಜಕೀಯ ದುರುದ್ದೇಶದಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಬಿಜೆಪಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇವಲ ಕಾಂಗ್ರೆಸ್‌ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಅದು ಚುನಾವಣೆ ಸಂದರ್ಭದಲ್ಲಿ ಈ ದಾಳಿಗಳು ನಡೆಯುತ್ತಿವೆ. ಇದು ರಾಜಕೀಯ ಪ್ರೇರಿತ ದಾಳಿ ಎಂದರು.

ಪ್ರತಿಭಟನೆಯಲ್ಲಿ ಗುಲಬರ್ಗಾ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ ನೆಲೋಗಿ, ಮಾಜಿ ಮೇಯರ್‌ ದಶರಥ(ಬಾಬು) ವಂಟಿ, ಮುಖಂಡರಾದ ಶಿವಕುಮಾರ ಬಾಳಿ, ದೀಪಕರೆಡ್ಡಿ, ದಿಗಂಬರ ಬೆಳಮಗಿ, ಜಿ.ಪಂ. ಮಾಜಿ ಅಧ್ಯಕ್ಷೆ ಶೋಭಾ ದಿಗಂಬರ ಬೆಳಮಗಿ, ಗೋಪಾಲದೇವ, ಶಿವರಾಜ ಪಾಟೀಲ, ಎಐಸಿಸಿ ಕಾರ್ಯದರ್ಶಿ ಶಮೀನಾ ಶಬ್ಬೀರ ಹಾಗೂ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next