Advertisement
ನಗರದ ಜಿಲ್ಲಾಡಳಿತ ಭವನದ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಇಡೀ ವಿಶ್ವವೇ ಕೋವಿಡ್-19 ರಿಂದ ನಲುಗಿ ಹೋಗಿದೆ. ಭಾರತವು ಸಹ ಎರಡು ತಿಂಗಳುಗಳ ಕಾಲ ಕಠಿಣ ಲಾಕ್‌ಡೌನ್‌ನಿಂದ ತತ್ತರಿಸಿದ್ದು, ಆರ್ಥಿಕತೆ ತೀವ್ರ ಕುಸಿತಕ್ಕೆ ಈಡಾಗಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿ ಹಲವು ಕಾರ್ಖಾನೆಗಳು ವಾಹನಗಳು ಓಡಾಡದೇ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಯಾಗಿದೆ. ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಯಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲ ಬೆಲೆ 38 ಡಾಲರ್ ಗೆ ಕುಸಿದಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 90 ರಿಂದ 120ಡ ಡಾಲರ್ ಇತ್ತು. ಆಗ 65 ರೂ. ಪೆಟೊ್ರೀಲ್ ದರ ಇತ್ತು. ತೈಲ ಬೆಲೆ ಪಾತಾಳಕ್ಕೆ ಹೋಗಿದ್ದರೂ ಬಿಜೆಪಿ ಸರ್ಕಾರ ಪೆಟ್ರೋಲ್ ದರವನ್ನು ಏರಿಸುತ್ತಲೇ ಇದೆ. ಇದು ಖಂಡನೀಯ ಎಂದರು.
Related Articles
Advertisement
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿ.ಪಂ.ಅಧ್ಯಕ್ಷೆ ಅಶ್ವಿನಿ, ಶಾಸಕ ಆರ್.ನರೇಂದ್ರ, ಎಂಎಲ್‌ಸಿ ಧರ್ಮಸೇನ, ಮಾಜಿ ಶಾಸಕರಾದ ಎಸ್.ಜಯಣ್ಣ, ಎಸ್.ಬಾಲರಾಜ್, ಮಾಜಿ ಸಂಸದ ಎಂ.ಶಿವಣ್ಣ, ಜಿ.ಪಂ. ಸದಸ್ಯರಾದ ಶಿವಮ್ಮ, ಕೆ.ಪಿ.ಸದಾಶಿವಮೂರ್ತಿ, ಕೆರೆಹಳ್ಳಿನವೀನ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಮುಖಂಡ ಗಣೇಶ್‌ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಮಹಮ್ಮದ್‌ಅಸ್ಗರ್, ತೋಟೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚೇತನ್‌ದೊರೈರಾಜು ಇತರರು ಭಾಗವಹಿಸಿದ್ದರು.