Advertisement

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

12:17 PM Sep 07, 2018 | Team Udayavani |

ಬೆಂಗಳೂರು: ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ಜಿಲ್ಲಾ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕವಿಕಾ ಮಾಜಿ ಅಧ್ಯಕ್ಷ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, 2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಅಚ್ಛೇ ದಿನ್‌ ಬರುತ್ತದೆ ಎಂದು ಜನರಿಗೆ ಭರವಸೆ ನೀಡಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ.

Advertisement

ಆದರೆ, ನಿರಂತರ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ, ಡಾಲರ್‌ ಎದುರು ರೂಪಾಯಿ ಬೆಲೆ ಕುಸಿತ ಕಾಣುತ್ತಿರುವುದು. ದೇಶದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ದೇಶದ ಇತಿಹಾಸದಲ್ಲಿಯೇ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರದ ದುರಾಡಳಿತವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next