Advertisement

ಯತ್ನಾಳ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

12:38 AM Mar 01, 2020 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ವಿರುದ್ಧ ಅವಹೇಳಕನಾಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ ಮುಖಂಡ ಎಸ್‌. ಮನೋಹರ್‌, ಶಾಸಕ ಯತ್ನಾಳ್‌ ನಾಲಿಗೆ ಹಿಡಿತವಿಲ್ಲದೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಹಿರಿಯರನ್ನು ಗೌರವಿಸುವ ಬದಲಿಗೆ, ಪಾಕಿಸ್ತಾನದ ಏಜೆಂಟ್‌ ಎಂದು ಕರೆದಿರುವುದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯರನ್ನು ಟೀಕಿಸಿ ಪ್ರಚಾರ ಬಯಸುವ ಬಿಜೆಪಿ ಶಾಸಕ ಯತ್ನಾಳ್‌ರಿಂದ ಬಿಜೆಪಿಗೆ ಅವಮಾನವೇ ಹೊರತು, ಇತರರಿಗೆ ಅಲ್ಲ ಎಂದು ಬಿಜೆಪಿ ನಾಯಕರುಗಳು ಅರ್ಥ ಮಾಡಿಕೊಳ್ಳಬೇಕೆಂದರು. ದೊರೆಸ್ವಾಮಿ ಅವರು ಪಕ್ಷಾತೀತ ವ್ಯಕ್ತಿ. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ ಎನ್ನುವುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಯತ್ನಾಳ್‌ ಅವರನ್ನು ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸದಂತೆ ತಡೆಯಬೇಕು. ವಿಧಾನಸಭೆಯಿಂದ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಜಿ.ಜನಾರ್ಧನ್‌, ಎ.ಆನಂದ್‌, ಯುವ ಕಾಂಗ್ರೆಸ್‌ ಮುಖಂಡರಾದ ಇ.ಶೇಖರ್‌, ಶ್ರೀಧರ್‌, ಉಮೇಶ್‌, ಪುಟ್ಟರಾಜು, ದೀಪಕ್‌, ಆಶಾ ರಾಜು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next